Ticker

6/recent/ticker-posts

Ad Code

Responsive Advertisement

ಕೇಂದ್ರೀಯ ವಿವಿ ಕೋರ್ಸ್ ಸದ್ಬಳಕೆಗೆ ಕರೆೆ - ಡಾ. ಎಸ್.ಜೆ.ವಿ. ಮಹಿಪಾಲ

ಬಳ್ಳಾರಿ ಅ 26. ವಿದ್ಯಾರ್ಥಿಗಳು ಕೇಂದ್ರೀಯ ವಿಶ್ವವಿದ್ಯಾಲಯಗಳ ವಿವಿಧ ಕೋರ್ಸ್ಗಳ ಸದುಪಯೋಗ ಪಡೆಯಬೇಕು ಎಂದು ಬಸವರಾಜೇಶ್ವರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಸ್.ಜೆ.ವಿ. ಮಹಿಪಾಲ ಅವರು ಕರೆ ನೀಡಿದರು.ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಮತ್ತು ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ವಿಕಾಸ ಅಕಾಡೆಮಿ, ಬಳ್ಳಾರಿ ವತಿಯಿಂದ ಇಲ್ಲಿಯ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ ಶರಣ ಸಭಾಂಗಣದಲ್ಲಿ ಜಿಲ್ಲೆಯ ಪದವಿಪೂರ್ವ ಹಾಗೂ ಪದವಿ ಕಾಲೇಜು ಉಪನ್ಯಾಸಕರಿಗೆ ದೇಶದ ಕೇಂದ್ರೀಯ ವಿಶ್ವವಿದ್ಯಾಲಯಗಳ ವಿವಿಧ ಕೋರ್ಸ್ಗಳು, ಪ್ರವೇಶ ಹಾಗೂ ಆರ್ಹತಾ ಪರೀಕ್ಷೆ ಕುರಿತು ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳ ಅನುಕೂಲಕ್ಕಾಗಿಯೇ ಸರ್ಕಾರ ಕಲಬುರ್ಗಿಯ ಕಡಗಂಚಿಯಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪಿಸಿದೆ. ಈ ಭಾಗದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿಲ್ಲ, ಅವರಿಗೆ ಮಾರ್ಗದರ್ಶನ ಕೊರತೆ ಇದೆ, ಹೀಗಾಗಿ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಕೇಂದ್ರ ವಿಶ್ವವಿದ್ಯಾಲಯಗಳ ಕೋರ್ಸ್ಗಳ ಮಾಹಿತಿ ನೀಡಬೇಕು ಎಂದು ಹೇಳಿದರು.

ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಪ್ರಭುದೇವ ಕಪ್ಪಗಲ್ಲು ಮಾತನಾಡಿ, ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಹಲವಾರು ಕೋರ್ಸ್ಗಳು ಇವೆ, ಉಪನ್ಯಾಸಕರು ಈ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬೇಕು ಎಂದು ಮನವಿ ಮಾಡಿದರು.ಕಲಬುರ್ಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 10 ಸ್ನಾತಕ ಹಾಗೂ 26 ಸ್ನಾತಕೋತ್ತರ ಕೋರ್ಸ್ಗಳು ಇವೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಕೇಂದ್ರೀಯ ವಿವಿಯ ಸಹಾಯಕ ಪ್ರಾಧ್ಯಾಪಕ ಡಾ.ಅಪ್ಪಗೆರೆ ಸೋಮಶೇಖರ್ ತಿಳಿಸಿದರು.ವಿಕಾಸ ಅಕಾಡೆಮಿಯ ಜಿಲ್ಲಾ ಸಂಚಾಲಕ ಡಾ.ವಿ.ಆರ್.ವಸ್ತçದ ಮಾತನಾಡಿದರು.

ಕಲಬುರ್ಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಡಾ. ಗಣಪತಿ, ಡಾ. ಕಾಂಬ್ಳೆ, ಡಾ.ಲಾಯಕ್ ಅಲಿ ಹಾಗೂ ಇತರ ಸಂಪನ್ಮೂಲ ವ್ಯಕ್ತಿಗಳು ಬೆಳಗಿನ ಅವಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಮಧ್ಯಾಹ್ನದ ಅವಧಿಯಲ್ಲಿ ಕಲೆ ಹಾಗೂ ವಾಣಿಜ್ಯ ವಿಷಯಕ್ಕೆ ಸಂಬAಧಿಸಿದ ಕೋರ್ಸ್ಗಳ ಮಾಹಿತಿ ನೀಡಿದರು. ವಿಕಾಸ ಅಕಾಡೆಮಿಯ ಜಿಲ್ಲಾ ಸಹ-ಸಂಚಾಲಕ ಅಡವಿಸ್ವಾಮಿ ಹಿರೇಮಠ ಅತಿಥಿಗಳನ್ನು ಸ್ವಾಗತಿಸಿದರು. ಜೋಳದರಾಶಿ ಪೊಂಪನಗೌಡ ವಂದಿಸಿದರು. ಪ್ರವೀಣ್ ನಾಯಕ್ ನಿರೂಪಿಸಿದರು. ಜಿಲ್ಲೆಯ 180 ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಉಪನ್ಯಾಸಕರು ಪಾಲ್ಗೊಂಡಿದ್ದರು.





Post a Comment

0 Comments

Ad Code

Responsive Advertisement