Ticker

6/recent/ticker-posts

Ad Code

Responsive Advertisement

ಬಳ್ಳಾರಿ ಶಾಸಕ ಗಾಲಿ ಸೋಮಶೇಖರ್‌ರೆಡ್ಡಿಯವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಬಳ್ಳಾರಿ ಆ 02.ಬಳ್ಳಾರಿ ನಗರ ಶಾಸಕರಾದ ಜಿ ಸೋಮಶೇಖರರೆಡ್ಡಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಇಂದು ಭಾರತೀಯ ಜನತಾ ಪಾರ್ಟಿ ಬಳ್ಳಾರಿ ನಗರ ಘಟಕ ವತಿಯಿಂದ ಬಿಜೆಪಿ ರಾಷ್ಟಿಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಮನವಿ ಮಾಡಿಕೊಳ್ಳಲಾಯಿತು.


ಈ ಸಂದರ್ಭದಲ್ಲಿ ಬಳ್ಳಾರಿ ನಗರ ಅಧ್ಯಕ್ಷರಾದ ಕೆ.ಬಿ.ವೆಂಕಟೇಶ್ವರ ಹಾಗೂ ನಗರ ಪ್ರಧಾನ ಕಾರ್ಯದರ್ಶಿಗಳಾದ ರಾಮಾಂಜಿನಿ, ಪಾಲಿಕೆ ಸದಸ್ಯರಾದ ಕೆ.ಎಸ್.ಅಶೋಕ್ ಕುಮಾರ್, ಸುರೇಂದ್ರ, ಹನುಮಂತ ಗುಡಗಂಟಿ, ಬಿಜೆಪಿ ನಗರ ಮಾಧ್ಯಮ ಸಂಚಾಲಕರಾದ ರಾಜೀವ್, ನಗರದ ಘಟಕದ ಪ್ರಹ್ಲಾದ್, ಕೇದಾರ್‌ಸ್ವಾಮಿ, ಪುಷ್ಪಲತಾ, ಲಕ್ಷ್ಮಿ ದೇವಿ, ರೈತ ಮೋರ್ಚಾ ನಗರ ಅಧ್ಯಕ್ಷರಾದ ಸತ್ಯನಾರಾಯಣ, ಓ.ಬಿ.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುಂಡೇಕರ್ ರಾಜೇಶ್, ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ಜ್ಯೋತಿಪ್ರಕಾಶ್, ಎಸ್ ಸಿ ಮೋರ್ಚಾ ನಗರ ಅಧ್ಯಕ್ಷ ರಾಜೇಶ್, ಎಸ್ ಟಿ ಮೋರ್ಚಾ ನಗರ ಅಧ್ಯಕ್ಷ ರಾಣಿತೋಟ ವೀರೇಶ್, ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಓಂ ಪ್ರಕಾಶ್, ಮೈನಾರಿಟಿ ಮೋರ್ಚಾ ನಗರ ಅಧ್ಯಕ್ಷ ಫಿರೋಜ್ ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement