Ticker

6/recent/ticker-posts

Ad Code

Responsive Advertisement

ಕುಕ್ಕೆ, ಧರ್ಮಸ್ಥಳಕ್ಕೆ ತೆರಳುವ ಯಾತ್ರಿಕರ ಗಮನಕ್ಕೆ..

 


ಧರ್ಮಸ್ಥಳದಲ್ಲಿ ದ.ಕ.ಜಿಲ್ಲಾಧಿಕಾರಿ ಆದೇಶದಂತೆ ಗುರುವಾರದಿಂದ ಇದೇ 15ರವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಯಾವುದೇ ಸೇವೆ, ಪೂಜೆಗಳು ನಡೆಯುವುದಿಲ್ಲ. ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಊಟ, ವಸತಿಗೆ ಅವಕಾಶವಿಲ್ಲ. ವಾರಾಂತ್ಯ ದಿನ ಭಕ್ತಾದಿಗಳಿಗೆ ದೇವರ ದರ್ಶನಕ್ಕೂ ಅವಕಾಶವಿಲ್ಲ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ದೇವರ ದರ್ಶನಕ್ಕೆ ಬೆಳಿಗ್ಗೆ ಗಂಟೆ 7 ರಿಂದ ಸಂಜೆ 7ರ ವರೆಗೆ ಮಾತ್ರ ಅವಕಾಶವಿದೆ.

ಕುಕ್ಕೆಯಲ್ಲಿ ಸಹ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ಅಧಿಕವಾಗಿರುವುದರಿಂದ ಭಕ್ತರ ಆರೋಗ್ಯ ಹಿತದೃಷ್ಟಿಯಿಂದ ಕುಕ್ಕೆಯಲ್ಲಿ ಸಹ ಗುರುವಾರದಿಂದ ಆ.15ರ ತನಕ ಕೇವಲ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 11.30 ತನಕ, ಮಧ್ಯಾಹ್ನ 12.15-1.30 ಹಾಗೂ 2.30ರಿಂದ ಸಂಜೆ  7.00 ತನಕ ಭಕ್ತರು ದೇವರ ದರ್ಶನ ಮಾಡಬಹುದು. 

ತೀರ್ಥಪ್ರಸಾದ, ಅನ್ನಪ್ರಸಾದ ವಿತರಣೆ ಇರುವುದಿಲ್ಲ. ಅಲ್ಲದೆ, ಯಾವುದೇ ಸೇವೆಗಳು ನಡೆಯುವುದಿಲ್ಲ. ವಾರಾಂತ್ಯ ದಿನಗಳನ್ನು ಹೊರತುಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 72 ಗಂಟೆಯೊಳಗೆ ಆರ್‌ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ನೀಡಬೇಕು.

ದೇವಳದ ಮುಂಭಾಗದಲ್ಲಿ ಕಡ್ಡಾಯ ವಾಗಿ ದೇಹದ ಉಷ್ಣತೆ ತಪಾಸಣೆ ಮಾಡಲಾಗುವುದು. ಅಲ್ಲದೆ, ಒಳ ಪ್ರವೇಶಿಸುವಾಗ ಸ್ಯಾನಿಟೈಸರ್ ನೀಡಲಾಗುವುದು. ಜ್ವರ, ಕೆಮ್ಮು, ಶೀತವಿರುವ ಭಕ್ತರಿಗೆ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.

Post a Comment

0 Comments

Ad Code

Responsive Advertisement