Ticker

6/recent/ticker-posts

Ad Code

Responsive Advertisement

ಶಾಸಕ ಜಮೀರ್ ಅಹಮ್ಮದ್ ಮನೆ, ಕಚೇರಿ ಮೇಲೆ‌ ಐ.ಟಿ ದಾಳಿ


 ಬೆಳಿಗ್ಗೆ ಆರು ಗಂಟೆ ಸುಮಾರಿಗೆ ದಾಳಿ ಆರಂಭವಾಗಿದೆ. ದಾಖಲೆ ಪತ್ರಗಳ ತಪಾಸಣೆ ನಡೆಯುತ್ತಿದೆ.

ಶಿವಾಜಿನಗರ ವ್ಯಾಪ್ತಿಯ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜಮೀರ್ ಅವರ ಮನೆ, ಚಾಮರಾಜಪೇಟೆಯಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಜಮೀರ್ ಒಡೆತನದ ಫ್ಲ್ಯಾಟ್ ಸೇರಿದಂತೆ ಹಲವು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ಶೋಧ ನಡೆಯುತ್ತಿದೆ.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರ ಮನೆ, ಕಚೇರಿಗಳ‌ ಮೇಲೆ ಗುರುವಾರ ಬೆಳಿಗ್ಗೆಯೇ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ.

ಜಮೀರ್ ನ್ಯಾಷನಲ್ ಟ್ರಾವೆಲ್ಸ್ ಹೆಸರಿನಲ್ಲಿ ಸಾರಿಗೆ ಕ್ಷೇತ್ರಕ್ಕೆ ಸಂಬಂಧಿಸಿದ ಉದ್ಯಮವನ್ನೂ ಹೊಂದಿದ್ದಾರೆ. ತೆರಿಗೆ ವಂಚನೆ ಆರೋಪದ ಮೇಲೆ ದಾಳಿ ನಡೆದಿದೆ.

Post a Comment

0 Comments

Ad Code

Responsive Advertisement