ಬೆಂಗಳೂರು,ಆ.13- ಏಳು ತಿಂಗಳ ಹಿಂದೆ ಯುವ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದ ರಕ್ಷಾ ರಾಮಯ್ಯ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಯುವ ಕಾಂಗ್ರೆಸ್ ಉಸ್ತುವಾರಿ ನಾಯಕ ಕೃಷ್ಣ ಅಲಾವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಮೊಹಮ್ಮದ್, ಧ್ರುವನಾರಾಯಣ್, ಮಾಜಿ ಸಚಿವರಾದ ಎಂ.ಆರ್.ಸೀತಾರಾಮ್, ಆಂಜನೇಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಸೇರಿದಂತೆ ಅನೇಕರ ಸಮ್ಮುಖದಲ್ಲಿ ರಕ್ಷಾ ರಾಮಯ್ಯ ಅಧಿಕಾರ ಸ್ವೀಕರಿಸಿದರು.
ಬಳಿಕ ಮಾತನಾಡಿ, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಯುವ ಕಾಂಗ್ರೆಸ್‍ನ ಕಾರ್ಯಕರ್ತರು 9 ಸಾವಿರ ಜನರಿಗೆ ಬೆಡ್ ಒದಗಿಸಿದ್ದಾರೆ. 2.5 ಲಕ್ಷ ಆಹಾರ ಕಿಟ್ ವಿತರಣೆ, 500 ಠಾಣೆಗಳಲ್ಲಿ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಕಾರ್ಯಕ್ರಮ ಮಾಡಿದ್ದಾರೆ. 8 ಸಾವಿರ ಮಂದಿಗೆ ಆ್ಯಂಬುಲೆನ್ಸ್ ಸೇವೆ ಒದಗಿಸಿದ್ದಾರೆ ಎಂದು ವಿವರಿಸಿದರು. ದೇಶದಲ್ಲಿ ಮೋದಿ ಅಲೆ ಇದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅಲೆ ಇರುವುದಂತೂ ನಿಜ. ಆದರೆ ಅದು ಮೋದಿಯದಲ್ಲ. ದ್ವೇಷ ಮತ್ತು ದುರಾಡಳಿತದ ಅಲೆಯಿದೆ. ಪ್ರಧಾನಿ ಯವರು ತನಿಖಾ ಸಂಸ್ಥೆಗಳನ್ನು ಖಾಸಗಿ ಆಸ್ತಿ ಎಂಬಂತೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಡಿಕೆ ಶಿವಕುಮಾರ್ ಸಿದ್ದರಾಮಯ್ಯರವರು ಸಲೀಂ ಅಹ್ಮದ ಧ್ರುವನಾರಾಯಣ್ ರವರು ಬೈರತಿ ಸುರೇಶ ಸೌಮ್ಯರೆಡ್ಡಿರವರು ನಾರಾಯಣಸ್ವಾಮಿ ಪ್ರೆಸಿಡೆಂಟ್ ಗಳು ಅಧ್ಯಕ್ಷರುಗಳು ಕಾರ್ಯಕರ್ತರು ಭಾಗವಹಿಸಿದ್ದರು
ಪುಲ್ವಾಮದಂತಹ ದಾಳಿಗಳನ್ನು ತಡೆಯಲು ಪೆಗಾಸಸ್ ಬೇಹುಗಾರಿಕೆ ಸಾಫ್ಟ್‍ವೇರ್ ಬಳಸುವ ಬದಲು ರಾಜಕೀಯ ಕಾರಣಕ್ಕಾಗಿ ರಾಜಕಾರಣಿಗಳು ನ್ಯಾಯಾಧೀಶರ ಹಾಗೂ ಪತ್ರಕರ್ತರ ವಿರುದ್ಧ ಬಳಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿ.ವಿ.ಶ್ರೀನಿವಾಸ್ ಮಾತನಾಡಿ,ರಾಜ್ಯದಲ್ಲಿ ಬಿಜೆಪಿಗೆ ಜನ ಪೂರ್ಣ ಪ್ರಮಾಣದ ಬಹುಮತ ನೀಡಿಲ್ಲ. ಕುದುರೆ ವ್ಯಾಪಾರದಿಂದ ದುರ್ಮಾಗದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯವರು ಎಲ್ಲದರಲ್ಲೂ ಕಮಿಷನ್ ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದರು.
ದೇಶ ಭಕ್ತಿಯ ಬಗ್ಗೆ ಮಾತನಾಡುತ್ತಾರೆ, ಯಾವುದೇ ಹೋರಾಟ ಮಾಡದ ಬಿಜೆಪಿಯವರು ದೇಶದ ಇತಿಹಾಸ ಕಟ್ಟಿದ ನಾವು ಕಾಂಗ್ರೆಸಿಗರು ಎಂದು ಹೇಳಿಕೊಳ್ಳಲು ಹೆಮ್ಮೆಪಡಬೇಕು ಎಂದರು. ಕೆಳಹಂತದಿಂದ ಹೋರಾಟದ ಮೂಲಕ ಬಂದವರಿಗೆ ಪಕ್ಷದಲ್ಲಿ ಉನ್ನತ ಸ್ಥಾನ ಸಿಗುತ್ತಿದೆ. ಬಿ.ವಿ.ಶ್ರೀನಿವಾಸ್ ಜಾತಿ, ಹಣ ಯಾವುದೇ ಹಿನ್ನೆಲೆ ಇಲ್ಲದೆ ಇದ್ದು, ಸ್ವಂತ ಪರಿಶ್ರಮದ ಮೂಲಕ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೊಡಬೇಕೆಂದು ಪ್ರಸ್ತಾವನೆ ಬಂದಾಗ ನಾನು ಮೊದಲು ಪಕ್ಷ ಕಟ್ಟುತ್ತೇನೆ. ಅಧಿಕಾರ ನಂತರ ಎಂದು ಅವಕಾಶವನ್ನು ನಿರಾಕರಿಸಿದರು ಎಂದು ಹೇಳಿದರು. ಬಿಜೆಪಿಯವರು ಕಾಂಗ್ರೆಸಿಗರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅದಕ್ಕೆ ನಾವು ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.






0 Comments