Ticker

6/recent/ticker-posts

Ad Code

Responsive Advertisement

TUMKUR : ಕಳಪೆ ಗುಣಮಟ್ಟದ ಯುಜಿಡಿ ಕಾಮಗಾರಿ: ಪರಿಶೀಲನೆ ನಡೆಸಲು ಮಾಜಿ ಶಾಸಕ ರಾಜಣ್ಣ ಒತ್ತಾಯ

ಮಧುಗಿರಿ - ಪಟ್ಟಣದಲ್ಲಿ ಯುಜಿಡಿ ಕಾಮಗಾರಿಯು ಕಳಪೆ ಗುಣಮಟ್ಟದಿಂದ ಕೂಡಿದ್ದು, ಆಮೆಗತಿಯಲ್ಲಿ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ ತುಂಬಾ ಅನಾನುಕೂಲವಾಗುತ್ತಿದೆ. ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಉತ್ತಮ ಗುಣಮಟ್ಟ ಕಾಯ್ದುಕೊಂಡು ಜರೂರಾಗಿ ಕಾಮಗಾರಿ ಮುಗಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳನ್ನು ಕರೆಸಿ ಪರಿಶೀಲನೆ ನಡೆಸಲು ಕ್ರಮ ಕೈಗೊಳ್ಳಲು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. 

ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ತಾಲೂಕಿನಲ್ಲಿ ಕಳ್ಳತನ, ಮಟ್ಕಾ, ಜೂಜಾಟ ಹಾಗೂ ಇನ್ನಿತರ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಆದರಿಂದ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿದೆ ಹಾಗೂ  ತಾಲೂಕಿನಲ್ಲಿ ಅಕ್ರಮ ಮಧ್ಯ ಮಾರಾಟ ಹಾವಳಿ ಹೆಚ್ಚಾಗಿದ್ದು, ಅದನ್ನು ತಪ್ಪಿಸಲು ಅಬಕಾರಿ ಅಧಿಕಾರಿಗಳು ಕಾನೂನು ಬದ್ದವಾಗಿ ಕೆಲಸ ಮಾಡುವ ಮೂಲಕ ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದರು.  

ಇಂದಿರಾ ಕ್ಯಾಂಟಿನ್ ಹೆಸರು ಬದಲಾಯಿಸಬೇಕು ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಹೇಳಿರುವುದು ಖಂಡನೀಯ ಎಂದ ಅವರು ಬಿಜೆಪಿಯವರು ಬಡವರ್ಗದ ಪರವಾಗಿ ಯೋಜನೆಯನ್ನು ರೂಪಿಸಿ ಅವರಿಗೆ ಬೇಕಾದ ಹೆಸರನ್ನು ಇಟ್ಟುಕೊಳ್ಳಲಿ ಎಂದರು. 

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಜಾತಿ ಜನಗಣತಿ ಸಮೀಕ್ಷೆ ನಡೆಸಿದ್ದರು. ಈ ವರದಿಯನ್ನು ಸರ್ಕಾರ ಶೀಘ್ರವೇ ಬಹಿರಂಗಪಡಿಸಿ ಅದರ ಆದಾರದ ಮೇಲೆ ತಳ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಂಶಗಳನ್ನು ಪರಿಗಣಿಸಿ ಆ ಸಮುದಾಯಗಳಿಗೆ ನ್ಯಾಯ ಒದಗಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ ಅವರು, ರಾಜ್ಯದ ಮೇಕೆದಾಟು ಹಾಗೂ ಮಹದಾಯಿ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಾಗಬೇಕು. ಈ ಯೋಜನೆಯ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. 

ಕೊಡಿಗೇನಹಳ್ಳಿ ಹೋಬಳಿ ಗ್ರಾಮವೊಂದರಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಇತ್ತೀಚೆಗೆ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂತಹ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಪಟ್ಟಣದ ಕಾರ್ಡಿಯಲ್ ಶಾಲೆಯ ವಿಧ್ಯಾರ್ಥಿನಿ ಹರ್ಷಿತಾ 625 ಅಂಕಗಳಿಸಿ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಆ ಶಾಲೆಯ ಆಡಳಿತ ಮಂಡಳಿ ಶುಲ್ಕ ಮತ್ತು ವ್ಯಾಸಂಗದ ಸಂಪೂರ್ಣ ವೆಚ್ಚವನ್ನು ಆ ವಿಧ್ಯಾರ್ಥಿನಿಗೆ ಮರುಪಾವತಿ ಮಾಡಿರುವುದು ಶ್ಲಾಘನೀಯ ಎಂದ ಅವರು, ರಾಜ್ಯದಲ್ಲಿ ಶಾಲಾ ಕಾಲೇಜು ಪ್ರಾರಂಭ ಮಾಡುವ ಬಗ್ಗೆ ತಜ್ಞರ ಅಭಿಪ್ರಾಯಗಳನ್ನು ಪಡೆದು ಸರ್ಕಾರ ನಿರ್ಧಾರ ಮಾಡಬೇಕು ಎಂದರು.  




Post a Comment

0 Comments

Ad Code

Responsive Advertisement