Ticker

6/recent/ticker-posts

Ad Code

Responsive Advertisement

ಅಧಿವೇಶನ: ಸೆ. 13ರಿಂದ 24ರ ವರೆಗೆ ನಿಷೇದಾಜ್ಞೆ ಜಾರಿ


ದಿನಾಂಕ: 13.09.2021 ರಿಂದ 24.09.2021 ರವರೆಗೆ  ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನಗಳು ನಡೆಯಲಿದ್ದು, ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ, ಇತ್ಯಾದಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುತ್ತವೆ. ಇದರಿಂದ ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೆ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯುAಟಾಗುವ ಸಾಧ್ಯತೆಗಳು ಇರುವ ಸಂಬAಧ ಈ ನಿಟ್ಟಿನಲ್ಲಿ ಅಧಿವೇಶನದ ಕಲಾಪಗಳು ಸುಗಮವಾಗಿ ನಡೆಯುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರತಿಬಂಧಕಾಜ್ಞೆಯನ್ನು ಹೊರಡಿಸಲಾಗಿದೆ.
ದಿನಾಂಕ:13-09-2021 ರಿಂದ ದಿನಾಂಕ: 24-09-2021 ರವರೆಗೆ ಅಧಿವೇಶನಗಳು ನಡೆಯುವ ದಿನಗಳಂದು ಪ್ರತಿದಿನ ಬೆಳಿಗ್ಗೆ 06-00 ಗಂಟೆಯಿAದ ಮಧ್ಯರಾತ್ರಿ 12-00 ಗಂಟೆಯವರೆಗೆ ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಈ ಕೆಳಕಂಡ ನಿಬಂಧನೆಗಳಿಗೆ ಒಳಪಡುವಂತೆ ನಿಷೇದಾಜ್ಞೆಯನ್ನು ವಿಧಿಸಲಾಗಿದೆ.
1. ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು
2. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದು 
3. ಶಸ್ತçಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತçಗಳನ್ನು ಅಥವಾ ದೈಹಿಕ ಹಿಂಸೆಯನ್ನುAಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದು
4. ಯಾವುದೇ ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು  ಶೇಖರಿಸುವುದು
5. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆೆ.\ಎಂದು    ಪೊಲೀಸ್ ಆಯುಕ್ತರು ಹಾಗೂ  ಅಪರ ಜಿಲ್ಲಾ ದಂಡಾಧಿಕಾರಿಗಳು ಆದ ಕಮಲ್ ಪಂತ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

Post a Comment

0 Comments

Ad Code

Responsive Advertisement