Ticker

6/recent/ticker-posts

Ad Code

Responsive Advertisement

BELGAUM PALIKE ELECTIONS ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ

2021 ಸೆಪ್ಟೆಂಬರ್ 3 ರಂದು ಬೆಳಗಾವಿ ಮಹಾನಗರ ಪಾಲಿಕೆ ಗೆ ಚುನಾವಣೆ ನಡೆಯಲಿದ್ದು, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ (ಬೈರತಿ) ಅವರು ದಿನಾಂಕ 31-8-2021 ರಂದು ‌ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕೈಗೊಂಡರು.





ಬೆಂಗಳೂರಿನಿಂದ ಬೆಳಗಾವಿ ಗೆ ಆಗಮಿಸಿದ ಬಸವರಾಜ ಅವರು ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದರು.

 ನಮ್ಮ ಪಕ್ಷದ ‌ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಭಿವೃದ್ಧಿ ಕಾರ್ಯಗಳು ವೇಳೆ ಪಡೆದುಕೊಂಡಿತು ಎಂದು ಹೇಳಿದರು.

ನಗರಾಭಿವೃದ್ಧಿ ಸಚಿವನಾದ ಮೇಲೆ ನಾನು ಬೆಳಗಾವಿಗೆ ಐದಾರು ಬಾರಿ ಭೇಟಿ ನೀಡಿದ್ದು, ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಬಗ್ಗೆ ಗಮನ ಹರಿಸಿ ಪ್ರಗತಿ ಸಾಧಿಸಲು ಸಾಧ್ಯವಾಯಿತು ಎಂದರು.

ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮತ್ತಷ್ಟು ಅಭಿವೃದ್ಧಿಗೆ ಶ್ರಮಿಸಲು  ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

 ಮಂಗಳವಾರ ಸಂಜೆ ವರೆಗೂ ನಡೆಸಿದ ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ‌ ಶ್ರೀ ಅನಿಲ್ ಬೆನಕೆ, ಬೆಳಗಾವಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ‌ಶಶಿಕಾಂತ ಪಾಟೀಲ, ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಕಾರ್ಯಕರ್ತರು ಸೇರಿದಂತೆ ಹಲ ಮುಖಂಡರು ಭಾಗವಹಿಸಿದ್ದರು.

Post a Comment

0 Comments

Ad Code

Responsive Advertisement