ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಹೊನ್ನಾವರ, ಭಾಗಮಂಡಲ, ಸಂತಹಳ್ಳಿ, ಆಗುಂಬೆ, ಸಿದ್ದಾಪುರ, ಅಗ್ರಹಾರ ಕೋಣಂದೂರು, ಕದ್ರ, ತೀರ್ಥಹಳ್ಳಿ, ತಾಳಗುಪ್ಪ, ಮಾಣಿ, ಧರ್ಮಸ್ಥಳ, ಅಂಕೋಲ, ಗೋಕರ್ಣ, ಸೋಮವಾರಪೇಟೆ, ಪೊನ್ನಂಪೇಟೆ, ಸಕಲೇಶಪುರ, ಮಂಡಗದ್ದೆ, ವಿರಾಜಪೇಟೆ, ಮಂಚಿಕೆರೆ, ಯಲ್ಲಾಪುರ, ಕಳಸ, ನಿಪ್ಪಾಣಿ, ಬೈಲಹೊಂಗಲ, ಲಕ್ಷ್ಮೇಶ್ವರ, ಸಕೇಶ್ವರ, ಆನವಟ್ಟಿ, ಶಿಕಾರಿಪುರ, ಬಾಳೆಹೊನ್ನೂರು, ಪುತ್ತೂರು, ಮತ್ತಿಕೊಪ್ಪದಲ್ಲಿ ಭಾರೀ ಮಳೆಯಾಗಿರುವುದಾಗಿ ವರದಿಯಾಗಿದೆ.
ಬೆಂಗಳೂರು ನಗರದಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
0 Comments