Ticker

6/recent/ticker-posts

Ad Code

Responsive Advertisement

ಲಸಿಕಾ ಅಭಿಯಾನ: ನೋಡಲ್ ಅಧಿಕಾರಿಗಳ ನೇಮಿಸಿ ಡಿಸಿ ಮಾಲಪಾಟಿ ಆದೇಶ

 ಬೃಹತ್ ಕೋವಿಡ್ ಲಸಿಕಾ ಅಭಿಯಾನ ಸೆ.17ರಂದು ಲಸಿಕಾ ಅಭಿಯಾನ ಯಶಸ್ವಿಗೆ ನೋಡಲ್ ಅಧಿಕಾರಿಗಳ ನೇಮಿಸಿ ಡಿಸಿ ಮಾಲಪಾಟಿ ಆದೇಶ

ಬಳ್ಳಾರಿ,ಸೆ.15: ಇದೇ 17ರಂದು ರಾಜ್ಯದಾದ್ಯಂತ ಬೃಹತ್ ಪ್ರಮಾಣದ ಲಸಿಕಾ ಅಭಿಯಾನವನ್ನು ರಾಜ್ಯ ಸರಕಾರ ಹಮ್ಮಿಕೊಂಡಿದ್ದು,ಅದರAತೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಸಹ ಅಂದು ಬೃಹತ್ ಕೋವಿಡ್ ಲಸಿಕಾ ಅಭಿಯಾನ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಈ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ತಾಲೂಕು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

ತಾಲೂಕು ನೋಡಲ್ ಅಧಿಕಾರಿಗಳ ವಿವಿರ: ಬಳ್ಳಾರಿ ತಾಲೂಕಿನ ನೋಡಲ್ ಅಧಿಕಾರಿಯಾಗಿ ಬಳ್ಳಾರಿ ಸಹಾಯಕ ಆಯುಕ್ತರು (7795221361), ಸಿರುಗುಪ್ಪ ತಾಲೂಕಿನ ನೋಡಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು (9008356562), ಸಂಡೂರು ತಾಲೂಕಿನ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು (9964768334), ಕುರುಗೋಡು ತಾಲೂಕು ನೋಡಲ್ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು (8951988622), ಹೊಸಪೇಟೆ ತಾಲೂಕು ನೋಡಲ್ ಅಧಿಕಾರಿಯಾಗಿ ಹೊಸಪೇಟೆ ಸಹಾಯಕ ಆಯುಕ್ತರು (9606729144), ಕಂಪ್ಲಿ ತಾಲೂಕು ನೋಡಲ್ ಅಧಿಕಾರಿಯಾಗಿ ಕೃಷಿ ಇಲಾಖೆಯ ಉಪ ನಿರ್ದೇಶಕರು-1 (9480078972), ಹಗರಿಬೊಮ್ಮನಹಳ್ಳಿ ತಾಲೂಕಿನ ನೋಡಲ್ ಅಧಿಕಾರಿಯಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರು (9019294225), ಕೂಡ್ಲಿಗಿ ತಾಲೂಕಿನ ನೋಡಲ್ ಅಧಿಕಾರಿಯಾಗಿ ತೋರಣಗಲ್ಲು ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ(ವಾಡಾ) ಆಯುಕ್ತರು (9845712728), ಹರಪನಹಳ್ಳಿ ತಾಲೂಕಿನ ನೋಡಲ್ ಅಧಿಕಾರಿಯಾಗಿ ಹರಪನಹಳ್ಳಿ ಸಹಾಯಕ ಆಯುಕ್ತರು (9620663868), ಕೊಟ್ಟೂರು ತಾಲೂಕಿನ ನೋಡಲ್ ಅಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಉಪನಿದೇಶಕರು (9448999248), ಹಡಗಲಿ ತಾಲೂಕಿನ ನೋಡಲ್ ಅಧಿಕಾರಿಯಾಗಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು(8277930401)ಗಳನ್ನು  ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಈ ಎಲ್ಲಾ ಅಧಿಕಾರಿಗಳು ಕೂಡಲೇ ತಾಲೂಕು ಮಟ್ಟದ ಸಭೆ ಕರೆದು ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಾಲಪಾಟಿ ಅವರು ಸೂಚಿಸಿದ್ದಾರೆ.

ಆಯಾ ತಾಲೂಕಿನ ತಾಪಂ ವತಿಯಿಂದ ಪ್ರತಿಯೊಂದು ಗ್ರಾಪಂಗೆ ನೋಡಲ್ ಅಧಿಕಾರಿಗಳನ್ನು ಈಗಾಗಲೇ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ನಿಯೋಜಿಸಿದ್ದು, ಸಂಬAಧಪಟ್ಟ ಗ್ರಾಪಂ ನೋಡಲ್ ಅಧಿಕಾರಿಗಳು ಲಸಿಕಾ ಕಾರ್ಯಕ್ರಮದ ದಿನ ಗ್ರಾಪಂನಲ್ಲಿ ಇದ್ದುಕೊಂಡು ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಕ್ತ ಕ್ರಮವಹಿಸಿ, ಬೇಕಾದ ಎಲ್ಲ ಅಗತ್ಯ ಸಿದ್ದತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.


Post a Comment

0 Comments

Ad Code

Responsive Advertisement