ಕನ್ನಡಿಗರ ಸಮಗ್ರ ಹಿತಾಸಕ್ತಿಗೆ ಶ್ರಮಿಸುತ್ತಿರುವ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನಕ್ಕೆ ಪ್ರಯತ್ನ: ಶಾಸಕ ಸೋಮಶೇಖರ್ ರೆಡ್ಡಿ. ಬಳ್ಳಾರಿ, ಸೆ.28: ಕರ್ನಾಟಕ ರಾಜ್ಯದ ಗಡಿಭಾಗದಲ್ಲಿನ ಕನ್ನಡಿಗರ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕöÈತಿಕ ಅಗತ್ಯತೆಗಳನ್ನು ಪೂರೈಸುವ ಮತ್ತು ಕನ್ನಡಿಗರ ಹಿತಾಸಕ್ತಿ ಕಾಪಾಡುವುದರ ಜೊತೆಗೆ ನೆರೆ ರಾಜ್ಯಗಳ ಕನ್ನಡಿಗರ ಸಮಗ್ರ ಹಿತಾಸಕ್ತಿ ಸುಧಾರಿಸುವಲ್ಲಿ ನಿರತರಾಗಿರುವ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗೊAದಿಗೆ ಚರ್ಚಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಅವರು ಹೇಳಿದರು. ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ಬಳ್ಳಾರಿ ಜಿಲ್ಲಾಡಳಿತದ ಸಹಯೋಗದಲ್ಲಿ ಭಾರತ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಗಡಿನಾಡಿನಲ್ಲಿ ಕನ್ನಡ ಜಾಗೃತಿ ಸಾಂಸ್ಕöÈತಿಕ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ನೀಡಿದಲ್ಲಿ ಗಡಿಭಾಗದಲ್ಲಿ ಕನ್ನಡ ಸಂಸ್ಕöÈತಿ, ಕನ್ನಡ ಅಸ್ಮೀತೆ ಮತ್ತು ಕನ್ನಡ ಸೊಗಡು ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾದಂತಹ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದ ಶಾಸಕ ಸೋಮಶೇಖರ ರೆಡ್ಡಿ ಅವರು ಇದಕ್ಕಾಗಿ ಮುಖ್ಯಮಂತ್ರಿಗಳಲ್ಲಿ ಕಾಡಿಬೇಡಿಯಾದರೂ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸಿಕೊಡುವುದಕ್ಕೆ ಪ್ರಯತ್ನಿಸಲಾಗುವುದು ಎಂದರು. ಗಡಿಭಾಗದಲ್ಲಿ ಕುಂದುತ್ತಿರುವ ನಮ್ಮ ಕನ್ನಡ ಭಾಷೆ, ಕಲೆ, ಸಂಸ್ಕೃತಿಯ ಬೆಳವಣಿಗೆ ಅತ್ಯಂತ ಅಗತ್ಯವಿದೆ ಎಂಬ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಶಾಸಕ ಸೋಮಶೇಖರರೆಡ್ಡಿ ಅವರು ಈ ಪ್ರಾಧಿಕಾರವು ಅಧ್ಯಕ್ಷ ಸೋಮಶೇಖರ ಅವರ ನೇತೃತ್ವದಲ್ಲಿ ಅತ್ಯಂತ ಉತ್ತಮವಾದ ಕೆಲಸ ಮಾಡುತ್ತಿದೆ, ಅವರನ್ನು ಶಾಶ್ವತವಾಗಿ ಈ ಪ್ರಾಧಿಕಾರಕ್ಕೆ ಮುಂದುವರಿಸಿದ್ದÀಲ್ಲಿ ಗಡಿಪ್ರದೇಶದ ಕನ್ನಡಿಗರ ಹಾಗೂ ಕನ್ನಡ ಭಾಷಾ ಹಿತಾಸಕ್ತಿ ದೃಷ್ಟಿಯಿಂದ ಒಳ್ಳೆಯದು ಎಂದರು. ವಿಧಾನಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ ಅವರು ಮಾತನಾಡಿ, ಗಡಿಪ್ರದೇಶದಲ್ಲಿ ಕನ್ನಡ ಭಾಷಾ ಉಳಿವಿಗಾಗಿ ಸಂಗನಬಸವ ಸ್ವಾಮೀಜಿ ಅವರು ಶಾಲೆಯೊಂದನ್ನ ಪ್ರಾರಂಭಿಸಿ ನಡೆಸುತ್ತಿದ್ದಾರೆ. ಉಚಿತ ಶಿಕ್ಷಣ ಜೊತೆಗೆ ದಾಸೋಹವೂ ನಡೆಸುತ್ತಿರುವುದು ಹೆಮ್ಮೆಯ ವಿಷಯ ಎಂದರು. ಗಡಿನಾಡಿನ ಪ್ರದೇಶಗಳಲ್ಲಿ ಕನ್ನಡ ಸಂಸ್ಕೃತಿ, ಕನ್ನಡ ಅಸ್ಮೀತೆ ಉಳಿಸಿ ಹಾಗು ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸೋಣ ಎಂದರು. ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್‌ರವರು ಮಾತನಾಡಿ, ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರವು ಗಡಿಭಾಗದ ಸಾಂಸ್ಕೃತಿಕ, ಸಾಮಾಜಿಕ, ಸಾಹಿತ್ಯಿಕ ಮತ್ತು ಅರ್ಥಿಕ ಸ್ಥಿತಿಗತಿ ಸೇರಿದಂತೆ ಸಮಗ್ರ ಅಧ್ಯಯನ ನಡೆಸಲು ಮುಂದಾಗಿದ್ದು, ಇದರ ಜವಾಬ್ದಾರಿಯನ್ನು ಕನ್ನಡ ವಿವಿಗೆ ವಹಿಸಲಾಗಿದೆ. ಇದರ ವರದಿ ಬಂದ ನಂತರ ಗಡಿಪ್ರದೇಶದ ಅಭಿವೃದ್ಧಿಗೆ ಸಮಗ್ರ ನೀತಿ ರೂಪಿಸಲಾಗುವುದು ಎಂದರು. ಪ್ರಾಧಿಕಾರದಿAದ ಕಯ್ಯಾರ್ ಕಿಯ್ಞಣ್ಣ ರೈ, ಜಯದೇವಿಯವರ ತಾಯಿ ಲಿಗಾಡೆ ಹೆಸರಿನಲ್ಲಿ ರಾಜ್ಯಪ್ರಶಸ್ತಿ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಕರ್ನಾಟಕ ರಾಜ್ಯವು 6 ನೆರೆಯ ರಾಜ್ಯಗಳೊಂದಿಗೆ ಗಡಿ ಹಂಚಿಕೊAಡಿದ್ದು, ಈ ಗಡಿಪ್ರದೇಶದಲ್ಲಿರುವ ಜನರು ದ್ವಿಭಾಷಾ ಮತ್ತು ದ್ವಿಸಂಸ್ಕೃತಿ ಇರುತ್ತದೆ. ಎರಡು ಭಾಷೆಗಳ ನಡುವೆ ಸಿಲುಕಿಹಾಕಿಕೊಂಡಿರುವ ಕನ್ನಡಿಗರಲ್ಲಿ, ಕನ್ನಡ ಅಸ್ಮೀತೆ ಮತ್ತು ಕನ್ನಡ ಪ್ರಜ್ಞೆ ಮೂಡಿಸುವ ಕೆಲಸವನ್ನು ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರವು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದು ಹೇಳಿದ ಅವರು ಪ್ರಾಧಿಕಾರದ ಅನುದಾನದಲ್ಲಿ ಗಡಿಪ್ರದೇಶದಲ್ಲಿರುವ ಶಾಲೆಗಳ ಕಟ್ಟಡ, ಶೌಚಾಲಯ, ಗ್ರಂಥಾಲಯ ನಿರ್ಮಾಣ, ಪುಸ್ತಕಗಳ ಒದಗಿಸುವಿಕೆ, ಪೀಠೋಪಕರಣಗಳ ನೀಡಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸುವಿಕೆ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ ಎಂದರು.ಜಿಲ್ಲಾಮಟ್ಟದ ಅಧಿಕಾರಿಗಳು ಗಡಿಭಾಗದ ಪ್ರದೇಶಗಳಿಗೆ ತಿಂಗಳಿಗೊಮ್ಮೆಯಾದರೂ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುವ ಕೆಲಸ ಮಾಡಬೇಕು ಎಂದು ಹೇಳಿದ ಅಧ್ಯಕ್ಷ ಸೋಮಶೇಖರ ಅವರು ಶಾಲೆಗಳ ಶಿಕ್ಷಕರು ತಮ್ಮ ಔಪಚಾರಿಕ ಶಿಕ್ಷಣ ಆರಂಭಿಸುವುದಕ್ಕಿAತ ಮುನ್ನ ನಾಡುನುಡಿ, ಸಂಸ್ಕೃತಿ, ತಂದೆ-ತಾಯಿ-ಗುರುಗಳ ಬಗ್ಗೆ ಗೌರವ, ದೇಶದ ಬಗ್ಗೆ ಯಾವ ರೀತಿ ಗೌರವ ತೋರಬೇಕು ಎಂಬುದನ್ನು ತಿಳಿಸಿಕೊಡಬೇಕು ಎಂದರು. ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯು ಭಾಷಾ-ಸಾಂಸ್ಕೃತಿಕ ಸಾಮರಸ್ಯಕ್ಕೆ ಹೆಸರುವಾಸಿಯಾಗಿದೆ. ಅತ್ಯಂತ ಸೌಹಾರ್ದತಯುತವಾಗಿ ಇಲ್ಲಿನ ಜನರು ಬದುಕುತ್ತಿದ್ದಾರೆ. ಇದುವರೆಗೆ ಗಡಿ, ಭಾಷೆ ಸಂಬAಧಿಸಿದ ಗಲಾಟೆಗಳು ನಡೆದಿಲ್ಲ ಎಂದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಪಿ.ಗಾದೆಪ್ಪ್ಪ, ಶ್ರೀನಿವಾಸ್ ಮೋತ್ಕರ್, ರಾಬಕೋ, ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ಉಪನಿರ್ದೇಶಕ ಚೋರನೂರು ಕೊಟ್ರಪ್ಪ ಸೇರಿದಂತೆ ಇನ್ನೀತರು ಇದ್ದರು. ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ವಂದಿಸಿದರು. ನಂತರ ನಡೆದ ಭರತನಾಟ್ಯ, ಡೊಳ್ಳುಕುಣಿತ, ವಿವಿಧ ನೃತ್ಯತಂಡಗಳ ಅದ್ಭುತ ಪ್ರದರ್ಶನ, ಸುಗಮ ಸಂಗೀತ ಜನಮನಸೊರೆಗೊಂಡವು. ಇದೇ ಸಂದರ್ಭದಲ್ಲಿ ಕವಿಗೋಷ್ಠಿ ನಡೆಯಿತು. ಭಾಗವಹಿಸಿದ್ದ 10 ಕವಿಗಳು ನಾಡು-ನುಡಿ, ಕನ್ನಡ ಅಸ್ಮಿತೆ ಕುರಿತು ಕವನಗಳನ್ನು ಪ್ರಸ್ತುತಪಡಿಸಿದ್ದು ವಿಶೇಷವಾಗಿತ್ತು.

0 Comments