ಬೆಂಗಳೂರು,ಸೆ.18- ಹಿರಿಯ ಕನ್ನಡ ಚಳುವಳಿ ಹೋರಾಟಗಾರ ಜಿ.ನಾರಾಯಣಕುಮಾರ್ ಸಂಸ್ಮರಣೆ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಇಂದು(ಸೆ.18) ಸಂಜೆ ಪ್ರಶಸ್ತಿ ಸಮಾರಂಭ ನಡೆಯಲಿದೆ.
ಕನ್ನಡ ಚಳುವಳಿ ಕೇಂದ್ರ ಸಮಿತಿ ವತಿಯಿಂದ ಜಿ.ನಾರಾಯಣಕುಮಾರ್ ಸಂಸ್ಮರಣೆ ಮತ್ತು ಜಿ.ನಾ.ಕು ಪ್ರಶಸ್ತಿ ಪ್ರದಾನ ಸಮಾರಂಭ ಸಂಜೆ 4 ಗಂಟೆಗೆ ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ ನಡೆಯಲಿದೆ.
ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕನ್ನಡ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್, ವಸತಿ ಸಚಿವ ವಿ.ಸೋಮಣ್ಣ, ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಡಾ.ಶಂಕರ್ ಬಿದರಿ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಭಾಗವಹಿಸುವರು.
ಈ ಸಂದರ್ಭದಲ್ಲಿ ಚಲನಚಿತ್ರ ನಟಿ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ತಾರಾ ಅನುರಾಧ, ಕರ್ನಾಟಕ ಜನಪರ ಅಕಾಡೆಮಿಯ ಮಾಜಿ ಅಧ್ಯಕ್ಷ ಬಾಲಂದೂರು ಕೆಂಪಯ್ಯ, ಲೇಖಕ ಪ್ರೋ.ಜಿ.ಅಬ್ದುಲ್ ಬಷೀರ್, ಕರವೇ ಅಧ್ಯಕ್ಷ ಶಿವರಾಮೇಗೌಡ, ಪತ್ರಕರ್ತ ವೈ.ಜೆ.ಅಶೋಕ್ ಕುಮಾರ್ ಅವರಿಗೆ ಜಿ.ನಾ.ಕು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


0 Comments