Ticker

6/recent/ticker-posts

Ad Code

Responsive Advertisement

ಬಿಜೆಪಿ ಹಾಸನ ಮತ್ತು ಮಂಡ್ಯ ಜಿಲ್ಲಾ ಪದಾಧಿಕಾರಿಗಳ ಸಭೆ

ಬೆಂಗಳೂರು: ಬಿಜೆಪಿ ಹಾಸನ ಮತ್ತು ಮಂಡ್ಯ ಜಿಲ್ಲಾ ಪದಾಧಿಕಾರಿಗಳ ಸಭೆಯು ಇಂದು ಹಾಸನದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. 

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಜನೋಪಯೋಗಿ ಮತ್ತು ಸರ್ವಸ್ಪರ್ಶಿ ಅಭಿವೃದ್ಧಿ ಕಾರ್ಯಗಳು ಮತ್ತು ರಾಜ್ಯದಲ್ಲಿ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಬೇಕು ಹಾಗೂ ಪಕ್ಷದ ದೃಢವಾದ ಸಂಘಟನೆಗೆ ಆದ್ಯತೆ ಕೊಡಬೇಕೆಂದು ಅರುಣ್ ಸಿಂಗ್ ಅವರು ಕರೆ ನೀಡಿದರು.

ಜಿಲ್ಲಾ ಉಸ್ತುವಾರಿಗಳು ಹಾಗೂ ಅಬಕಾರಿ ಸಚಿವರಾದ ಗೋಪಾಲಯ್ಯ, ರಾಜ್ಯ ಕ್ರೀಡಾ ಸಚಿವ ನಾರಾಯಣ ಗೌಡ, ಜಿಲ್ಲಾಧ್ಯಕ್ಷ ಎಚ್ ಕೆ ಸುರೇಶ್, ಮಾಜಿ ಸಚಿವ ಎ ಮಂಜು, ಶಾಸಕ ಪ್ರೀತಂ ಜೆ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ವಿಧಾನಪರಿಷತ್ ಸದಸ್ಯರು ಮತ್ತು ರಾಜ್ಯ ಕಾರ್ಯದರ್ಶಿ ಮುನಿರಾಜು ಗೌಡ, ರಾಜ್ಯ ವಕ್ತಾರ ಎಮ್.ಜಿ. ಮಹೇಶ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಟಿ. ಕುಮಾರ ಸ್ವಾಮೀಜಿ, ವಿಭಾಗ ಸಹ ಸಂಘಟನಾ ಕಾರ್ಯದರ್ಶಿಗಳಾದ ಕೃಷ್ಣ ಹಾಗೂ ಜಿಲ್ಲಾ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.


Post a Comment

0 Comments

Ad Code

Responsive Advertisement