ಮಧುಗಿರಿ - ನಾಡು-ನುಡಿ ಸೇವೆ ಮಾಡಲು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಚುನಾವಣೆಯಲ್ಲಿ ನನಗೆ ಬೆಂಬಲ ನೀಡಬೇಕೆಂದು ಕಸಾಪ ಜಿಲ್ಲಾಧ್ಯಕ್ಷ ಅಕಾಂಕ್ಷಿ ಎ.ಸಿ.ಮಹದೇವಪ್ಪ ತಿಳಿಸಿದರು.
ಪಟ್ಟಣದಲ್ಲಿನ ಕಸಾಪ ಸದಸ್ಯರನ್ನು ಭೇಟಿ ಮಾಡಿ ಮತಯಾಚಿಸಿದ ಅವರು, ನಾನು ಅಧಿಕಾರಕ್ಕಾಗಿ ಚುನಾವಣೆಗೆ ಸ್ಪರ್ಧಿಸುವವನಲ್ಲ, ಸಾಹಿತ್ಯ ಪರಿಷತ್ತಿನಲ್ಲಿರುವಂತಹ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ಚುನಾವಣೆಗೆ ಸ್ಪರ್ದಿಸಲಿದ್ದು, ಈ ಚುನಾವಣೆಯಲ್ಲಿ ಮತದಾರರು ನನಗೆ ಹೆಚ್ಚಿನ ಬೆಂಬಲ ನೀಡುವ ವಿಶ್ವಾಸವಿದೆ. ಮೂಲತಃ ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ಸೇವೆ ಮಾಡಿಕೊಂಡು ಬಂದಿದ್ದು, ಉತ್ತಮ ಸಮಾಜ ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನು ಮಾಡುವ ಬಹುದೊಡ್ಡ ಹಂಬಲವನ್ನು ನಾನು ಹೊಂದಿದ್ದು, ಮತದಾರರು ನನ್ನನ್ನು ಆಯ್ಕೆ ಮಾಡುವ ಮೂಲಕ ಕನ್ನಡದ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟರೆ ತುಮಕೂರು ಜಿಲ್ಲೆಗೆ ಗೌರವ ತರುವ ಕೆಲಸವನ್ನು ಮಾಡುತ್ತೇನೆ ಎಂದರು.

0 Comments