ಬೆಂಗಳೂರು, ಸೆ.1- ನಮ್ಮ ಮೆಟ್ರೋ ನಾಯಂಡಹಳ್ಳಿಯಿAದ ಕೆಂಗೇರಿ ಮಾರ್ಗದ ವಿಸ್ತರಣಾ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷ÷್ಯ ಮಾಡಿದ ಹಿನ್ನೆಲೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟೀಸ್ ಜಾರಿಗೊಳಿಸಿರುವುದು ಕಂಡು ಬಂದಿದೆ.
ಸರ್ಕಾರದ ಪ್ರತಿಯೊಂದು ಕಾರ್ಯಕ್ರಮಗಳಲ್ಲೂ ಕನ್ನಡವನ್ನು ಬಳಕೆ ಮಾಡಲೇಬೇಕೆಂದು ಸೂಚನೆ ನೀಡಲಾಗಿತ್ತು. ಇಂತಹ ಘಟನೆಗಳು ಮತ್ತೆ ಮತ್ತೆ ನಡೆಯುತ್ತಿರುವುದು ಅತ್ಯಂತ ಸೋಜಿಗದ ಸಂಗತಿ. ಯಾವುದೇ ಸಂದರ್ಭದಲ್ಲೂ ನಮ್ಮ ಸರ್ಕಾರ ಕನ್ನಡ ಭಾಷೆಯನ್ನು ಅಪಮಾನಿಸುವ ಅಥವಾ ಕಡೆಗಣಿಸುವವರನ್ನು ಸುಮ್ಮನೆ ಬಿಡುವುದಿಲ್ಲ. ತಕ್ಷಣವೇ ಮೆಟ್ರೋ ಅಧಿಕಾರಿಗಳು ಗಮನ ಹರಿಸಬೇಕೆಂದು ಸೂಚಿಸಿದ್ದಾರೆ.
ಈಗಾಗಲೇ ಹಲವು ಕನ್ನಡ ಸಂಘಟನೆಗಳು ಇದರ ಬಗ್ಗೆ ಚಕಾರವೆತ್ತಿದ್ದು, ಮುಂದಿನ ದಿನಗಳಲ್ಲಿ ಯಾವ ರೀತಿಯ ಉತ್ತರ ಸಿಗಲಿದೆ ಎಂಬುದನ್ನು ಕಾದು ನೊಡಬೇಕಿದೆ.
VARTHAJALA, MALLESWARA, BENGALURU


0 Comments