Ticker

6/recent/ticker-posts

Ad Code

Responsive Advertisement

ಡಿಕೆಶಿ ನೇತೃತ್ವದಲ್ಲಿ ಸಂಘಟನೆ:

25/09/2021, ಬೆಂಗಳೂರು, ಕರ್ನಾಟಕ ಕಾಂಗ್ರೆಸ್ ಪಾಲಿಗೆ ಟ್ರಬಲ್ ಶೂಟರ್ ಹಾಗೂ ಸದ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಒಕ್ಕಲಿಗ ಸಮುದಾಯದವರೇ ಆಗಿದ್ದು, ಅದನ್ನೇ ಮುಂದಿಟ್ಟು ಕೊಂಡು ಹಳೇ ಮೈಸೂರು ಪ್ರಾಂತ್ಯ ಅದರಲ್ಲೂ ವಿಶೇಷವಾಗಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಅಗತ್ಯ ಸಿದ್ಧತೆಗಳನ್ನು ಕಳೆದ ಒಂದು ವರ್ಷಗಳಿಂದಲೂ ಮಾಡಿಕೊಳ್ಳುತ್ತಿದ್ದು, ಬೆಂಗಳೂರಿನಲ್ಲಿ ನಡೆದ ಈ ಸಭೆ ಅಧಿಕೃತ ಪ್ರಕ್ರಿಯೆಗೆ ಚಾಲನೆ ನೀಡಿ ದಂತಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ/KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೋಡೆತ್ತಿನಂತೆ ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಶ್ರಮಿಸಿ ಒಕ್ಕಲಿಗ ಮತದಾರರನ್ನು ಕೊರೀಢೀಕರಿಸುವ ಪ್ರಯತ್ನ ನಡೆಸಿದ್ದರು. ಆದರೆ, ಅಂಬರೀಶ್ ಅಭಿಮಾನಿ ವರ್ಗ ಮತ್ತು ಇತರೆ ಸಮುದಾಯಗಳು ಜೆಡಿಎಸ್ ವಿರುದ್ಧ ಬಂಡಾಯ ಸಾರಿದ ಪರಿಣಾಮ ಸುಮಲತಾ ಗೆಲುವು ಸುಲಭವಾಯಿತು.

ಪ್ರತ್ಯೇಕ ಅಸ್ತಿತ್ವಕ್ಕೆ ಹೋರಾಟ: ಈಗ ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಪ್ರತ್ಯೇಕ ಅಸ್ತಿತ್ವಕ್ಕೆ ಹೋರಾಟ ನಡೆಸುತ್ತಿದ್ದು, ಒಕ್ಕಲಿಗರ ಮತಕೇಂದ್ರದ ಮೇಲೆ ಕಣ್ಣಿಟ್ಟಿದ್ದು, ಪರಸ್ಪರ ಸಂಘರ್ಷ ಅನಿವಾ ರ್ಯವೇ ಆಗಿದೆ. ಒಕ್ಕಲಿಗರ ವೋಟ್ ಬ್ಯಾಂಕ್‌ನ್ನೇ ನೆಚ್ಚಿಕೊಂಡು ಹಳೇ ಮೈಸೂರು ಪ್ರಾಂತ್ಯದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡಿರುವ ಜೆಡಿಎಸ್ ತನ್ನ ಮೂಲ ಮತದಾರರನ್ನು ಸಂರಕ್ಷಣೆ ಮಾಡಿಕೊಳ್ಳಲು ಮುಂದಾಗುತ್ತಿದ್ದರೆ, ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಹಿಂದ ಮತಗಳನ್ನು ಒಗ್ಗೂಡಿಸುವುದರ ಜೊತೆಗೆ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಒಕ್ಕಲಿಗರನ್ನು ಸೆಳೆಯುವ ಕಾರ್ಯಾಚರಣೆ ಮುಂದುವರೆಸಿದೆ.  ಅಲ್ಲದೆ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಸಿದ್ಧವಾಗುತ್ತಿದೆ.

ಬಿಜೆಪಿಯಿಂದಲೂ ಹರಸಾಹಸ: ಜೆಡಿಎಸ್‌ಗೆ ಪರ್ಯಾಯವಾಗಿ ಒಕ್ಕಲಿಗ ನಾಯಕತ್ವವನ್ನು ಪೋಷಿಸುತ್ತಾ ಬಂದಿರುವ ಕಾಂಗ್ರೆಸ್, 2023ರ ಚುನಾವಣೆಯಲ್ಲಿ ಜೆಡಿಎಸ್‌ನಷ್ಟೇ ಪ್ರಮಾಣದಲ್ಲಿ ಕಾಂಗ್ರೆ ಸ್‌ನಲ್ಲಿ ಹಿಡಿದಿಟ್ಟುಕೊಳ್ಳುವ ಪ್ರಯತ್ನ ಮುಂದು ವರೆಸಿದ್ದು, ಇದರಿಂದಾಗಿ ಮಾಜಿ ಮುಖ್ಯಮಂತ್ರಿ ಹೆಚ್ .ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಡಿ.ಕೆ.ಶಿವ ಕುಮಾರ್ ನಡುವೆ ಪ್ರತಿಷ್ಠೆ ತಲೆಎತ್ತಿದೆ. ಕಾಂಗ್ರೆಸ್-ಜೆಡಿಎಸ್‌ನ ಒಕ್ಕಲಿಗರ ವೋಟ್ ಬ್ಯಾಂಕ್ ಪೈಪೋಟಿ ನಡುವೆ ಬಿಜೆಪಿ ಕೂಡ ತನ್ನ ಪ್ರಾಬಲ್ಯ ಸಾಧಿಸುವ ಸಾಹಸಕ್ಕೆ ಮುಂದಾಗಿದೆ. ಕೆ. ಆರ್.ಪೇಟೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿ ರಾಜಕೀಯ ದಾಖಲೆ ಸೃಷ್ಟಿಸಿರುವ ಬಿಜೆಪಿ ಮುಂಬರುವ ಚುನಾವಣೆಯಲ್ಲಿ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದೆ.

Post a Comment

0 Comments

Ad Code

Responsive Advertisement