ಹುಬ್ಬಳ್ಳಿ ಸೆಪ್ಟೆಂಬರ್ 01 ಕರ್ನಾಟಕ ವಾರ್ತೆ: ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಮತ್ತು ಧಾರವಾಡ ಪೊಲೀಸ್ ಆಯುಕ್ತರಾದ ಲಾಬೂರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕಲಗೊಡ ಗುಡಸಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಮಹದೇವ ಬಿ ಚೆಟ್ಟಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.







0 Comments