Ticker

6/recent/ticker-posts

Ad Code

Responsive Advertisement

ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರ ಹಣಕಾಸು ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಿ.ಟಿ.ರವಿ

ಬೆಂಗಳೂರು: ಕಾಫಿ ಬೆಳೆಗಾರರು ರಾಷ್ಟಿçಕೃತ ಬ್ಯಾಂಕ್‌ಗಳಲ್ಲಿ ಮಾಡಿರುವ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ರಾಷ್ಟಿçಕೃತ ಬ್ಯಾಂಕುಗಳಿಗೆ ಸೂಚಿಸಬೇಕು ಎಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಎಂದು ಬಿಜೆಪಿ ರಾಷ್ಟಿçಯ ಪ್ರಧಾನ ಕಾರ್ಯದರ್ಶಿUಳು ಮತ್ತು ಚಿಕ್ಕಮಗಳೂರಿನ ಶಾಸಕರೂ ಆದ ಶ್ರೀ ಸಿ.ಟಿ.ರವಿ ಅವರು ತಿಳಿಸಿದ್ದಾರೆ.

ಅಷೆ?ಟೀ ಅಲ್ಲ ಆರ್ಥಿಕ ಹೊಡೆತದಿಂದ ನಲುಗಿರುವ ಕಾಫಿ ಉದ್ಯಮ ಮತ್ತು ಕಾಫಿ ಬೆಳೆಗಾರರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಮರುಸಾಲ ನೀಡುವಂತೆ ಹಾಲಿ ಇರುವ ಬಡ್ಡಿದರದಲ್ಲಿ ಕಾಫಿ ಬೆಳೆ ಹಾಗೂ ಇತರೆ ಕೃಷಿ ಕ್ಷೇತ್ರದ ಸಾಲಗಳನ್ನು ಬೆಳೆಗಾರರು ಮರುಪಾವತಿ ಮಾಡಲು ಸಾಧ್ಯವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಕಾಫಿ ಮತ್ತು ಇತರೆ ಕೃಷಿಯ ಸಮಗ್ರ ಸಾಲಗಳ ಮೇಲಿನ ಬಡ್ಡಿಯನ್ನು ಶೇ.3ರಷ್ಟು ನಿಗದಿಪಡಿಸಬೇಕು ಎಂದು ತಮ್ಮ ನೇತೃತ್ವದ ನಿಯೋಗವು ಒತ್ತಾಯಿಸಿದ್ದು, ಅದಕ್ಕೆ  ಸಚಿವರು ಮುಕ್ತ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ ಎಂದೂ ಶ್ರೀ ಸಿ.ಟಿ.ರವಿ ಅವರು ತಿಳಿಸಿದ್ದಾರೆ.

ಕಾಫಿ ಕೃಷಿಗೆ ಸಂಬAಧಿಸಿದ ಸಾಲವನ್ನು ಸರ್ಫೇಸಿ ಕಾಯ್ದೆ (ಸೆಕ್ಯುರಿಟೈಸೇಷನ್ ಅಂಡ್ ರೀಕನ್ಟçಕ್ಷನ್ ಆಫ್ ಫೈನಾನ್ಶಿಯಲ್ ಅಸೆಟ್ ಅಂಡ್ ಎನ್‌ಫೋರ್ಸ್ಮೆಂಟ್ ಆಫ್ ಸೆಕ್ಯುರಿಟಿ ಇಂಟರೆಸ್ಟ್) ಯಿಂದ ಹೊರಗಿಡುವಂತೆ ಒತ್ತಾಯಿಸಿದ್ದಕ್ಕೆ ಸಕಾರಾತ್ಮಕವಾಗಿ ಒಪ್ಪಿದ್ದಾರೆ. ಇದೀಗ ಕಾಫಿ ಉದ್ಯಮಕ್ಕೇ ಕಂಟಕವಾಗಿರುವ ಸರ್ಫೇಸಿ ಕಾಯ್ದೆಯಿಂದ ಕಾಫಿಗೆ ಸಂಬAಧಿಸಿದ ಎಲ್ಲಾ ರೀತಿಯ ಸಾಲವನ್ನು ಹೊರಗಿಡಬೇಕು ವಿತ್ತ ಸಚಿವರನ್ನು ಒತ್ತಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಕಾಫಿ ಬೆಳೆಗಾರರು ಪ್ರಾಕೃತಿಕ ವಿಕೋಪಕ್ಕೆ ಒಳಗಾಗಿದ್ದಾರೆ. ಹೆಚ್ಚು, ಗುಡ್ಡ ಜರುಗುವಿಕೆ, ತೋಟಗಾರಿಕೆ ಸಲಕರಣೆಗಳು, ಗಿಡಗಳು ಹಾಳಾಗುತ್ತಿವೆ. ಜೊತೆಗೆ ಸಾಂಕ್ರಾಮಿಕ ರೋಗವಾದ ಕೋವಿಡ್ ನಿಂದ ನಲುಗಿ ಹೋಗಿದ್ದಾರೆ. ಎಲ್ಲವನ್ನು ಪರಿಗಣಿಸಿ ಕಾಫಿ ಬೆಳೆಗಾರರ ನೆರವಿಗೆ ಬನ್ನಿ ಎಂದು ಕೋರಿಕೊಳ್ಳಲಾಗಿದೆ ಎಂದೂ ಅವರು ವಿವರಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಕಾಫಿ ಬೆಲೆ ಭಾರಿ ಕುಸಿತ ಕಂಡಿದೆ. ಹಾಗಾಗಿ ತಾವು ನಿಮ್ಮ ಸಮಯೋಚಿತ ಸಹಾಯವನ್ನು ಹಾಗೂ ಮಧ್ಯ ಪ್ರವೇಶಕ್ಕಾಗಿ ಕೇಂದ್ರದ ಸಹಾಯವನ್ನು ಕೋರಿದ್ದು, ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಲು ಕೇಂದ್ರದ ಆರ್ಥಿಕ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಮುಕ್ತ ಮನಸ್ಸಿನಿಂದ ಒಪ್ಪಿ ಮನವಿ ಸ್ವೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಮ್ಮ ರಾಜ್ಯದ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕಾಫಿ ಬೆಳೆಗಾರರು ಸಂಕಷ್ಠಕ್ಕೆ ಸಿಲುಕಿದ್ದಾರೆ. ಅದರಲ್ಲೂ ಕೋವಿಡ್-19 ಬಂದ ನಂತರ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಸುಂದರ ಮಲೆನಾಡಾಗಿರುವ ಕಾಫಿ ಸೀಮೆಯಲ್ಲಿ ಅತಿಯಾದ ಮಳೆ, ಹವಾಮಾನ ವೈಪರೀತ್ಯದಿಂದ ದಿನದಿಂದ ದಿನಕ್ಕೆ ಕಾಫೀ ತೋಟಗಳು ಮಾಯವಾಗುತ್ತಿವೆ. ಇದಕ್ಕೆ ಕಾರಣ ಅನೇಕ ಎಂದು ವಿವರಿಸಿದ್ದಾಗಿ ಅವರು ತಿಳಿಸಿದ್ದಾರೆ.

ಮೊದಲಿಗೆ ಸಾಂಕ್ರಾಮಿಕ ರೋಗವಾದ ಕೊರೊನಾವನ್ನು ಹಿಮ್ಮೆಟ್ಟುವ ಸಂಕಲ್ಪದಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿ ನಿರ್ವಹಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ಅತ್ಯುತ್ತಮವಾಗಿ ನಿರ್ವಹಣೆ ಮಾಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸಲಾಯಿತು. ಭಾರತದಂತಹ ದೊಡ್ಡ ರಾಷ್ಟçದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ನಿರ್ವಹಣೆ ಮಾಡುವ ಮೂಲಕ ಭಾರತವನ್ನು ಆರ್ಥಿಕ ಸಂಷಕ್ಟದಿAದ ಪಾರುಮಾಡಿದ್ದು ಧೀಃಶಕ್ತಿಯಂತೆ ಕಂಡಿದ್ದಾರೆ ಎಂದು ನಿಯೋಗವು ಮೆಚ್ಚುಗೆ ಸೂಚಿಸಿದ್ದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಅಷೆ?ಟೀ ಅಲ್ಲ ಇಡೀ ವಿಶ್ವ ಮತ್ತು ಭಾರತದಲ್ಲಿ ಕೊರೊನಾ ಸಂಕಷ್ಟಕ್ಕೆ ಪ್ರತಿ ವ್ಯಕ್ತಿಯೂ ನಲುಗಿ ಹೋಗಿದ್ದಾನೆ. ರಾಜ್ಯದಲ್ಲಿ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಕಾಫಿ ಬೆಳೆಯುವ ರೈತರು ಮತ್ತು ಮತ್ತು ಕಾಫಿ ಉದ್ಯಮಿಗಳು ಸಾಂಕ್ರಾಮಿಕ ರೋಗದಿಂದ ಆರ್ಥಿಕ ಸಂಷಕ್ಟ ಎದುರಿಸುತ್ತಿದ್ದಾರೆ. ಕಾಫಿ ಬೆಳೆಗಾರರು ರಾಷ್ಟಿçÃಕೃತ ಬ್ಯಾಂಕುಗಳಿAದ ಪಡೆದ ಸಾಲದ ಮೇಲೆ ವಿಧಿಸುತ್ತಿರುವ ಬಡ್ಡಿಯಿಂದ ಆರ್ಥಿಕ ಹೊರೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಕಾಫಿ ಬೆಳೆಗಾರರು ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವ ಮೂಲಕ ಸಮಸ್ಯೆಗೆ ಇತಿಶ್ರೀ ಹಾಡಬೇಕು ಎಂದು ಕೇಂದ್ರದ ಆರ್ಥಿಕ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿ ಬಂದಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಹೊರಡಿಸಿರುವ, ಕೃಷಿ ಸಾಲದ ಮರು ಹೊಂದಾಣಿಕೆಗೆ ಸ್ಪಷ್ಟ ಸೂಚನೆಯಿದ್ದರೂ ಕೂಡ ಹಲವು ರಾಷ್ಟಿçÃಕೃತ ಬ್ಯಾಂಕ್ ಹಾಗೂ ಇತರೆ ವಾಣಿಜ್ಯ ಬ್ಯಾಂಕು ಶಾಖೆಗಳು ಬೆಳೆಗಾರರ ಸಾಲದ ಖಾತೆಗಳನ್ನು ನವೀಕರಿಸಲು ಮಾಡಲು ಹಿಂಜರಿಯುತ್ತಿವೆ. ಈ ಬಗ್ಗೆಯೂ ಬ್ಯಾಂಕುಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಲಾಗಿದೆ ಎಂದು ಶ್ರೀ ಸಿ.ಟಿ.ರವಿ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಾಫಿ ಬೋರ್ಡ್ ಚೇರ್ಮನ್ ಶ್ರೀ ಎಂ. ಎಸ್. ಭೋಜೇಗೌಡ, ಡಾ. ಎಚ್.ಟಿ. ಮೋಹನ್ ಕುಮಾರ್ ಸೇರಿದಂತೆ ಕಾಫಿ ಬೆಳೆಗಾರರ ವಿವಿಧ ಒಕ್ಕೂಟಗಳ ಮುಖಂಡರು ಉಪಸ್ಥಿತರಿದ್ದರು ಎಂದು ಅವರು ತಿಳಿಸಿದ್ದಾರೆ.

Post a Comment

0 Comments

Ad Code

Responsive Advertisement