ಬೆಂಗಳೂರು: ಸಿಂಗನಾಯಕನಹಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಸಿಮೆ0ಟ್ ತುಂಬಿದ ಲಾರಿಯೊಂದು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕೆ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಸ್ಕೂಟರ್ ಸವಾರನನ್ನು ಸುಮಾರು ಇಪ್ಪತ್ತು ಮೀಟರ್ ದೂರ ಎಳೆದುಕೊಂಡು ಹೋಗಿರುವ ವಿದ್ರಾವಕ ಘಟನೆ ಸಂಭವಿಸಿದೆ. ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ ಎಂದು ತಿಳಿದು ಬಂದಿದೆ. ಅಪಘಾತ ಪರಿಣಾಮ ವಾಹನ ದಟ್ಟಣೆ ಹೆಚ್ಚಿದ್ದರಿಂದ ವಾಹನಗಳು ಸಾಲು ಸಾಲಾಗಿ ನಿಂತಿರುವುದು ಕಂಡು ಬಂದಿತ್ತು. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.
ಕೆಲಕಾಲ ಸಂಚಾರ ವ್ಯತ್ಯಯವಾಗಿರವುದು ಕಂಡು ಬಂದಿತ್ತು. ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-Varthajala.


0 Comments