Ticker

6/recent/ticker-posts

Ad Code

Responsive Advertisement

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹುಟ್ಟುಹಬ್ಬಕ್ಕೆ ಚಾಲನೆ

 ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ.



 ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ (ಬೈರತಿ) ಅವರು ದಿನಾಂಕ 5-9-2021 ರಂದು ದಾವಣಗೆರೆ ನಗರದ ವಿದ್ಯಾ ನಗರದ ರಸ್ತೆಯಲ್ಲಿ ಇರುವ  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಕನ್ನಡ ಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಣೆಗೆ ಚಾಲನೆ ನೀಡಿದರು.

ಇದೇ ವೇಳೆ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಮಕ್ಕಳಿಗೆ ಶಿಕ್ಷಣ ನೀಡುತ್ತಾರೆ. ದಾವಣಗೆರೆ ಜಿಲ್ಲೆಯ ಪ್ರತಿ ತಾಲ್ಲೂಕಿನಲು ಉತ್ತಮ ಶಿಕ್ಷಕ-ಶಿಕ್ಷಕಿಯನ್ನು ಜಿಲ್ಲಾಡಳಿತ ಪ್ರತಿವರ್ಷ ಗುರುತಿಸಿ ಪಟ್ಟಿ ನೀಡಿದರೆ, ಅವರಿಗೆ ವೈಯಕ್ತಿಕವಾಗಿ ಹತ್ತು ಸಾವಿರ ರೂಪಾಯಿಗಳ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.

ಈ ಕಾರ್ಯ ನಾನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿನಾಗಿರುವ ತನಕ ಮಾಡುತ್ತೇನೆ ಎಂದು ಭರವಸೆ ನೀಡುವ ಮೂಲಕ ಶಿಕ್ಷಕರಲ್ಲಿ ಅತ್ಮಸ್ಥೈರ್ಯ ತುಂಬಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ‌ ಶ್ರೀ ಎಸ.ಎ.ರವೀಂದ್ರನಾಥ ವಹಿಸಿದ್ದರು. ಜಿಲ್ಲಾಧಿಕಾರಿ ಶ್ರೀ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

VARTHAJALA, Malleswaram, Bengaluru

Post a Comment

0 Comments

Ad Code

Responsive Advertisement