ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿಯಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಅವರ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್ ಸಂಸ್ಥೆಯ ಆವರಣದಲ್ಲಿ ಶ್ರೀ ಸುರೇಶ್ ಚ. ಅಂಗಡಿ ಅವರ ಪ್ರತಿಮೆ ಅನಾವರಣಗೊಳಿಸಿದರು.
ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಸಂಸದೆ ಮಂಗಳಾ ಅಂಗಡಿ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಮಾಜಿ ಸಂಸದರಾದ ಪ್ರಭಾಕರ ಕೋರೆ, ಪ್ರಕಾಶ ಹುಕ್ಕೇರಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ADVERTISEMENT


0 Comments