Ticker

6/recent/ticker-posts

Ad Code

Responsive Advertisement

ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಿ ಅಭ್ಯರ್ಥಿಗಳ ಗೆಲುವಿಗೆ ಪಣತೊಡಬೇಕು: ಎ.ನಾರಾಯಣಸ್ವಾಮಿ

 ಮಧುಗಿರಿ - ಜಿ.ಪಂ ಹಾಗೂ ತಾ.ಪಂ ಚುನಾವಣೆ ಸಮೀಪಿಸುತ್ತಿದ್ದು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಿ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪಣತೊಡಬೇಕೆಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಅವರು, ನನ್ನಂತ ಸಾಮಾನ್ಯ ಕಾರ್ಯಕರ್ತನೂ ಸಹ ಕೇಂದ್ರ ಸಚಿವನಾಗುವುದು ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಧ್ಯ, ಮುಂಬರುವ ಚುನಾವಣೆಗಳಲ್ಲಿ ಸಾಮಾನ್ಯ ಕಾರ್ಯಕರ್ತರು ಜಯಶೀಲರಾಗಿ ಜಿ.ಪಂ ಹಾಗೂ ತಾ.ಪಂ ಅಧ್ಯಕ್ಷರುಗಳಾಗಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ, ಬಡವರ ಹಾಗೂ ಜನ ಸಮಾನ್ಯರ ಪರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ನಮ್ಮ ಕಾರ್ಯಕರ್ತರು ಈ ಯೋಜನೆಗಳ ಬಗ್ಗೆ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದಾಗ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ. ಕಾರ್ಯಕರ್ತರ ಆದೇಶಕ್ಕೆ ತಲೆಬಾಗಿ ನಾನು ಕೆಲಸ ಮಾಡುತ್ತೇನೆ. ಕಳೆದ 40 ವರ್ಷಗಳಿಂದ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದನಾಗಿದ್ದು, ನರೇಂದ್ರ ಮೋದಿಯವರ ನಾಯಕತ್ವದಲ್ಲಿ ತಳ ಸಮುದಾಯಗಳಿಗೂ ನ್ಯಾಯ ಒದಗಿಸುತ್ತೇನೆ ಎಂದರು.

ಬಿಜೆಪಿ ತಾಲೂಕು ಅಧ್ಯಕ್ಷ ಪಿ.ಎಲ್.ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮು, ನಾಗೇಂದ್ರಪ್ಪ,  ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ನಾಗರಾಜಪ್ಪ,  ಜಿಲ್ಲಾ ಎಸ್ಟಿ ಉಪಾಧ್ಯಕ್ಷ ಅಶ್ವಥ್ ನಾರಾಯಣ, ಜಿಲ್ಲಾ ಎಸ್ಸಿ ಮೋರ್ಚಾ  ಕಾರ್ಯದರ್ಶಿ ಶಿವಶಂಕರ,  ಮಂಡಲ  ಉಪಾಧ್ಯಕ್ಷೆ ಲಕ್ಷ್ಮೀ ಪ್ರಕಾಶ್, ಖಜಾಂಚಿ ತಿಮ್ಮಣ್ಣ, ಮಂಡಲ ಕಾರ್ಯಾಲಯ ಕಾರ್ಯದರ್ಶಿ ಲಕ್ಷ್ಮೀಪತಿ,  ಎಸ್ಸಿ ಮೋರ್ಚಾ ಅಧ್ಯಕ್ಷ ರವಿ.ಆರ್, ಪ್ರಧಾನ ಕಾರ್ಯದರ್ಶಿ ರವಿಕೀರ್ತಿ, ಕಾರ್ಯದರ್ಶಿ ಶಿವಕುಮಾರ್,  ಯುವ ಮೋರ್ಚಾ ಅಧ್ಯಕ್ಷ ಕಾರ್ತಿಕ್ ಆರಾಧ್ಯ,  ಪ್ರಧಾನ ಕಾರ್ಯದರ್ಶಿ ತೇಜಸ್ ಗೌಡ, ಮಹಿಳಾ  ಮೋರ್ಚಾ ಅಧ್ಯಕ್ಷೆ ರತ್ನ ವೆಂಕಟಪ್ಪ, ಉಪಾಧ್ಯಕ್ಷೆ ಲತಾ ಪ್ರದೀಪ್,  ಪ್ರಧಾನ ಕಾರ್ಯದರ್ಶಿ ರತ್ನಮ್ಮ, ರೈತ ಮೋರ್ಚಾ ಅಧ್ಯಕ್ಷ ಸುರೇಶ್ ರೆಡ್ಡಿ,  ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್,  ಎಸ್ಟಿ ಮೋರ್ಚಾ ಅಧ್ಯಕ್ಷ ಪ್ರಕಾಶ್,  ಪ್ರಧಾನ ಕಾರ್ಯದರ್ಶಿ  ನಾರಾಯಣ, ಹೋಬಳಿಗಳ ಅಧ್ಯಕ್ಷರುಗಳಾದ ಗಂಗಾಧರ,  ಪ್ರಸನ್ನ ಕುಮಾರ್,  ವೆಂಕಟೇಶ್, ಶಿವಶಂಕರ, ರಂಗನಾಥ, ನಗರಾಧ್ಯಕ್ಷ ನಾಗರಾಜು, ಮುಖಂಡರಾದ  ಮಂಜುನಾಥ್, ಶಾಂತಾರಾಧ್ಯ ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು.

ADVT.



Post a Comment

0 Comments

Ad Code

Responsive Advertisement