ಪ್ರಸ್ತುತ ಕೋವಿಡ್ ಸಮಯದಲ್ಲಾದ ಶೈಕ್ಷಣಿಕ ಗೊಂದಲಗಳ ಬಗ್ಗೆ ಆಮ್ ಆದ್ಮಿ ಪಕ್ಷವು ಫೀಸ್ ಇಳಿಸಿ ಮಕ್ಕಳ ಭವಿಷ್ಯ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ರಾಜ್ಯಾದ್ಯಂತ ಅಭಿಯಾನ ಕಾರ್ಯಕ್ರಮವನ್ನು ಮಾಡಿರುವ ವಿಚಾರ ನಮಗೆಲ್ಲ ತಿಳಿದೇ ಇದೆ.
ಈ ದಿಶೆಯಲ್ಲಿ ಅನೇಕ ಹೋರಾಟಗಳನ್ನು, ಪ್ರತಿಭಟನೆಗಳನ್ನು, ವಿಚಾರಸಂಕಿರಣಗಳನ್ನು ಹಮ್ಮಿಕೊಂಡು ಬಂದಿರುವ ವಿಚಾರವೂ ಸಹ ತಮಗೆ ತಿಳಿದೇ ಇದೆ.
ಇದರ ಮುಂದಿನ ಭಾಗವಾಗಿ ನಾಳೆ ಬೆಳಿಗ್ಗೆ 11.00 ಗಂಟೆಗೆ ನಗರದ ಫ್ರೀಡಂ ಪಾರ್ಕ್ ನಲ್ಲಿ ಚಿಂತನ ಮಂಥನ ಎಂಬ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪಾಲಕ - ಪೋಷಕರು ಆಗಮಿಸಿ ತಮ್ಮ ಅನಿಸಿಕೆಗಳನ್ನು ಅಹವಾಲುಗಳನ್ನು ಸಲ್ಲಿಸುವ ಮೂಲಕ ಮುಂದಿನ ನಡೆ ಏನೆಂಬುದನ್ನು ಸ್ಪಷ್ಟಪಡಿಸುವ ಹಾಗೂ ಸರ್ಕಾರಕ್ಕೆ ಕಣ್ತೆರೆಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದೇವೆ.
ಈ ಮಹತ್ವದ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲು ರಾಜ್ಯ ಕಂಡ ಅತ್ಯುತ್ತಮ ಸಂಸದೀಯ ಪಟು, ಮಾಜಿ ಸ್ಪೀಕರ್ - ಸಚಿವ ಹಾಗೂ ಶಾಸಕ ರಮೇಶ್ ಕುಮಾರ್ ರವರು ಭಾಗವಹಿಸಲು ಒಪ್ಪಿಕೊಂಡಿದ್ದಾರೆ. ಇವರೊಂದಿಗೆ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ರವರು ಸಹ ಭಾಗವಹಿಸಲಿದ್ದಾರೆ.


0 Comments