ಬೆಂಗಳೂರು : ಇಂದು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಣೆ ಮಾಡಿದೆ. ಚುನಾವಣಾ ಆಯೋಗವು ಉಪ ಚುನಾವಣೆ ಘೋಷಣೆ ಮಾಡಿದ ಕೂಡಲೇ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30/2021 ರಂದು ಚುನಾವಣೆ ಆಯೋಗ ಉಪಚುನಾವಣೆ ನಡೆಸಲಿದೆ. ಸಿಂದಗಿ ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ನಿಂದ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರು, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಮನಗೊಳಿಯವರನ್ನು ಕಾಂಗ್ರೆಸ್ ಪಕ್ಷದ ವರಿಷ್ಟರು ಘೋಷಣೆ ಮಾಡಿದ್ದಾರೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು ಹಾನಗಲ್ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿ ಫೈನಲ್ ಆಗಿಲ್ಲ. ಈ ಕ್ಷೇತ್ರದಲ್ಲಿ ಮನೋಹರ್ ತಹಶೀಲ್ದಾರ್, ಶ್ರೀನಿವಾಸ್ ಮಾನೆ ಆಕಾಂಕ್ಷಿಗಳಾಗಿದ್ದಾರೆ. ಆದ್ರೇ.. ವರಿಷ್ಠರು ಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದಾರೆ. ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲಿದೆ ಎಂದರು.
Shiva Prasad G. 7204714959
Varthajala Suddimane

0 Comments