ಶಿರಸಿ : ಕೆ.ಡಿ.ಸಿ.ಸಿ ಬ್ಯಾಂಕ್ ಶತಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಇಂದು ಬ್ಯಾಂಕ್ ಪ್ರಧಾನ ಕಚೇರಿಯ ಆವರಣದಲ್ಲಿ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ದೀಪ ಬೆಳಗಿಸುವುದರ ಮೂಲಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಅಧ್ಯಕ್ಷರ ಮಾತುಗಳನಾಡಿದರು.
ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರು ಶತಮಾನೋತ್ಸವದ ಸ್ಮರಣ ಸಂಚಿಕೆಯನ್ನು ಸಾಂಕೇತಿಕವಾಗಿ ಬಿಡುಗೊಳಿಸಿದರು ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಮೈಕ್ರೋ ಎ.ಟಿ.ಎಮ್ ಸೌಲಭ್ಯವನ್ನು ಹಾಗೂ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ ಅವರು ಭಾರತ ಬಿಲ್ ಪೇಮೆಂಟ್ ಸಿಸ್ಟಮ್ ಸೌಲಭ್ಯವನ್ನು ಉದ್ಘಾಟಿಸಿದರು.
ಈ ಸಮಾರಂಭದಲ್ಲಿ ವಿಧಾನಸಭೆ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಅಪೆಕ್ಸ್ ಬ್ಯಾಂಕ್ ನ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಹಾಗೂ ಶಾಸಕ ಆರ್.ವಿ.ದೇಶಪಾಂಡೆ, ಸುನೀಲ್ ನಾಯ್ಕ, ದಿನಕರ ಕೆ ಶೆಟ್ಟಿ ಹಾಗೂ ವಿಧಾನಪರಿಷತ ಸದಸ್ಯರು, ನಿಗಮ ಮಂಡಳಿಯ ಅಧ್ಯಕ್ಷರು, ಬ್ಯಾಂಕ್ ನ ನಿರ್ದೇಶಕರು, ಸಹಕಾರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.



0 Comments