Ticker

6/recent/ticker-posts

Ad Code

Responsive Advertisement

17 ಕೋಟಿ ಉದ್ಯೋಗ ಸೃಷ್ಟಿಸಿದ ಪ್ರಧಾನಿ ಮೋದಿ: ರಾಘವೇಂದ್ರ ಶ್ಲಾಘನೆ

ಸಾಮಾಜಿಕ ಆರ್ಥಿಕ ಬಲವರ್ಧನೆಗೆ ಪ್ರಧಾನಿ ನರೇಂದ್ರ ಮೋದಿ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಕೋರೋನಾ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಯುವಕರಿಗೆ 17 ಕೋಟಿಗೂ ಹೆಚ್ಚು ಉದ್ಯೋಗ ಸೃಷ್ಟಿಯಾಗಿದ್ದು, ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಮೋದಿಯವನ್ನು ಕೊಂಡಾಡಿದ್ದಾರೆ.


ಶಿವಮೊಗ್ಗದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಸೇವೆ ಮತ್ತು ಸಮರ್ಪಣಾ ಅಭಿಯಾನದ ನವಭಾರತ ಮೇಳ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ‘ಯುವಶಕ್ತಿಗೆ ಸ್ವ ಉದ್ಯೋಗದ ಅವಕಾಶಗಳನ್ನು ಕೇಂದ್ರ ಸರ್ಕಾರ ಕಲ್ಪಿಸಿದೆ. ಅಸಂಘಟಿತ ಕಾರ್ಮಿಕರ ರಕ್ಷಣೆಗೆ ಮತ್ತು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ದೇಶದ ಭದ್ರತೆಗೆ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಆದರೂ, ಕಾಂಗ್ರೆಸ್ ಅನಗತ್ಯವಾಗಿ ಆರೋಪ ಮಾಡುತ್ತಿದೆ’ ಎಂದು ಹೇಳಿದರು.

‘ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನದ ಅವಕಾಶ ಭಾರತಕ್ಕೆ ಸಿಕ್ಕಿದೆ. ಅಮೆರಿಕ ಮತ್ತು ಚೀನಾವನ್ನು ಒಂದೇ ವೇದಿಕೆಯಲ್ಲಿ ತಂದು ಅವರಿಗೂ ಸಲಹೆ ನೀಡುವ ಕೆಲಸ ಮಾಡಿದೆ. ಮೋದಿ ಅವರ ಚತುರತೆ ಮತ್ತು ಅವರ ಆಡಳಿತ ವೈಖರಿ ವಿಶ್ವದಲ್ಲೇ ಅವರಿಗೆ ಮೊದಲ ಸ್ಥಾನ ದೊರಕಿಸಿದೆ. ಮುಂದಿನ ದಿನಗಳಲ್ಲಿ ವಿಶ್ವದ ಆಡಳಿತವನ್ನೇ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಸೂಚನೆಯನ್ನು ಮೋದಿ ಆಡಳಿತ ನೀಡಿದೆ’ ಎಂದು ಶ್ಲಾಘಿಸಿದ್ದಾರೆ.

ಆತ್ಮನಿರ್ಭರ್ ಭಾರತದ ವಸ್ತು ಪ್ರದರ್ಶನ ಮತ್ತು ಮಾರಾಟ, ನವಭಾರತದ ನಿರ್ಮಾಣದ ಕುರಿತವಿಚಾರ ಗೋಷ್ಠಿಗಳು, ಚಲನಚಿತ್ರ ಪ್ರದರ್ಶನ, ಸಾಂಸ್ಕೃತಿಕ ಸ್ಪರ್ಧೆ ಮತ್ತು ಇತರೆ ಕಾರ್ಯಕ್ರಮಗಳನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಂಡಿತ್ತು.

ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಿ.ಎಸ್. ಅರುಣ್‌ಅವರು, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್, ಮೇಯರ್ ಸುನಿತಾ ಅಣ್ಣಪ್ಪ, ಯುವ ಮೋರ್ಚಾ ಅಧ್ಯಕ್ಷ ಹರಿಕೃಷ್ಣ, ಗಿರೀಶ್ ಪಟೇಲ್ ಅವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Post a Comment

0 Comments

Ad Code

Responsive Advertisement