ಬೆಂಗಳೂರು ನಗರದೆಲ್ಲಡೆ ರಸ್ತೆ ಗುಂಡಿಗಳು ವಿಪರೀತ ಹೆಚ್ಚಾಗಿ, ಜೀವ ತೆಗೆಯುವಷ್ಟು ಅಪಾಯಕಾರಿ ಮಟ್ಟ ತಲುಪಿರುವುದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿಯು ಬುಧವಾರದಂದು ರಸ್ತೆ ಗುಂಡಿಗಳ ಹಬ್ಬ ಹಮ್ಮಿಕೊಂಡಿದೆ.
ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ಹಾಗೂ ಬೆಂಗಳೂರು ನಗರದ ಎಎಪಿ ಅಧ್ಯಕ್ಷರಾದ ಮೋಹನ್ ದಾಸರಿ ನೇತೃತ್ವದಲ್ಲಿ ಈ ಅಭಿಯಾನ ನಡೆಯಲಿದೆ. ಅಕ್ಟೋಬರ್ 20ರ ಬುಧವಾರದಂದು ಬೆಳಗ್ಗೆ ಗಾಂಧಿನಗರ ಕ್ಷೇತ್ರದ ದತ್ತಾತ್ರೇಯ ಟೆಂಪಲ್ ವಾರ್ಡ್ 5ನೇಯ ಕ್ರಾಸ್ ಬಿಗ್ ಬಜಾರ್ ಬಳಿ ಇಂದು ಅಭಿಯಾನದಲ್ಲಿ ದತ್ತಾತ್ರೇಯ ಟೆಂಪಲ್ ವಾರ್ಡಿನ ಮಹಿಳಾ ಅಧ್ಯಕ್ಷೆ ಉಷಾ ಮೋಹನ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾದರು.
ಅಪಾಯಕಾರಿ ಗುಂಡಿಗಳನ್ನು ಗುರುತಿಸಿ, ಅದರ ಸುತ್ತ ರಂಗೋಲಿ ಹಾಕಿ, ದೀಪ ಹಚ್ಚುವ ಮೂಲಕ ರಸ್ತೆಗುಂಡಿಗಳ ಹಬ್ಬ ನೆರವೇರಲಿದೆ. ಕಳೆದ ಐದು ವರ್ಷಗಳಲ್ಲಿ ರಾಜ್ಯ ಸರ್ಕಾರವು 20,000 ಕೋಟಿ ರೂಪಾಯಿಯನ್ನು ಖರ್ಚು ಮಾಡಿದ್ದರೂ ರಾಜಧಾನಿಯ ರಸ್ತೆಗಳು ದುಸ್ಥಿತಿಯಲ್ಲಿ ಇರುವುದರ ಕುರಿತು ಜಾಗೃತಿ ಮೂಡಿಸಲು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜನಪ್ರತಿನಿಧಿಗಳು ತಮ್ಮ ಜೇಬು ತುಂಬಿಸಿಕೊಳ್ಳಲು ಕಳಪೆ ಕಾಮಗಾರಿ ಮಾಡಿರುವುದನ್ನು ಆಮ್ ಆದ್ಮಿ ಪಾರ್ಟಿಯು ಜನರ ಮುಂದೆ ಬಯಲು ಮಾಡಲಿದೆ.
0 Comments