ಬೆಂಗಳೂರು: ನಗರದ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು “ಮಾತಾಡ್ ಮಾತಾಡ್ ಕನ್ನಡ” ಅಭಿಯಾನದ ಪ್ರಯುಕ್ತವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು . ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತ್‍ಕುಮಾರ್, ಶಾಸಕರಾದ ಸಂಜೀವ ಮಠಂದೂರು, ವಿಧಾನಪರಿಷತ್ ಸದಸ್ಯರಾದ ಪ್ರತಾಪ್‍ಸಿಂಹ ನಾಯಕ್, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ವಕ್ತಾರರಾದ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಲೋಕೇಶ್ ಅಂಬೆಕಲ್ಲು, ಬಿಜೆಪಿ ರಾಜ್ಯ ಮುಖ್ಯ ವಕ್ತಾರರು ಹಾಗೂ ವಿಧಾನಪರಿಷತ್ ಮಾಜಿ ಸದಸ್ಯರೂ ಆದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮತ್ತು ಚುನಾವಣಾ ಆಯೋಗದ ಸಂಯೋಜಕರಾದ ದತ್ತಗುರು ಹೆಗಡೆ, ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಕನ್ನಡ ತಾಯಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
0 Comments