Ticker

6/recent/ticker-posts

Ad Code

Responsive Advertisement

ಮಾಜಿ ಶಾಸಕ ಎಂ.ಪಿ. ಕರ್ಕಿ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ


ಬೆಂಗಳೂರು: ಕುಮಟಾ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಕರ್ಕಿ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. 

ಉತ್ತರ ಕನ್ನಡ ಜಿಲ್ಲೆ ಹಾಗೂ ರಾಜ್ಯದಲ್ಲಿ ಜನಸಂಘ ಮತ್ತು ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಕರ್ಕಿಯವರ ಪಾತ್ರ ಮಹತ್ವದ್ದಾಗಿತ್ತು. ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಸೇವೆಯಲ್ಲಿ ಇವರು ಮಾಡಿರುವ ಸೇವೆ ಅನುಕರಣೀಯ.  ಕರ್ಕಿ ಅವರ ನಿಧನದಿಂದ ಸಂಘಪರಿವಾರ ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಂತಾಗಿದೆ. 

ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನಳಿನ್‍ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.


Post a Comment

0 Comments

Ad Code

Responsive Advertisement