ಬೆಂಗಳೂರು : ಉತ್ತರ ಕರ್ನಾಟಕಟದ ಸಂಸ್ಕತಿ, ಆಚಾರ ವಿಚಾರ, ಭಾಷೆಯನ್ನು ಪೆÇೀಷಿಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಉತ್ತರ ಕರ್ನಾಟಕ ನಾಗರಿಕರ ಅಭಿವೃದ್ಧಿ ಸಂಘ ಇದೇ 16ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಂಗಾರ ಹಬ್ಬವನ್ನು ಹಮ್ಮಿಕೊಂಡಿದೆ.
ಸಂಜೆ 4ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಬಂಗಾರ ಹಬ್ಬ ಮತ್ತು ಉತ್ತರ ಕರ್ನಾಟಕ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಮತ್ತಿತರ ಗಣ್ಯರು ಚಾಲನೆ ನೀಡಲಿದ್ದಾರೆ ಎಂದು ಉತ್ತರ ಕರ್ನಾಟಕ ನಾಗರಿಕರ ಅಭಿವೃದ್ಧಿ ಸಂಘದ ಅಧ್ಯಕ್ಷ ಮುರುಗೇಶ್ ಜವಳಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಳೆದ 28 ವರ್ಷಗಳ ಹಿಂದೆ ಸ್ಥಾಪನೆಯಾದ ಈ ಸಂಸ್ಥೆ, ಉತ್ತರ ಕರ್ನಾಟಕದ ಜನತೆಯ ಕಲ್ಯಾಣಕ್ಕಾಗಿ ಅನೇಕ ಸಾಮಾಜಿಕ ಕಲ್ಯಾಣ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದೆ. ಇದೀಗ 16ರಂದು ಈ ಸಾಂಸ್ಕತಿಕ ಕಾರ್ಯಕ್ರಮವು ಹೊಸ ಭಾಷೆಗೆ ಮುನ್ನುಡಿ ಬರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮಕ್ಕೆ ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ, ಶಂಕರಪಾಟೀಲ ಮುನೇನಕೊಪ್ಪ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಮಾಜಿ ಸಚಿವ ಎಂ.ಬಿ.ಪಾಟೀಲ್, ವಿಧಾನಪರಿಷತ್ನ ಮುಖ್ಯ ಸಚೇತಕ ಮಹಂತೇಶ ಕವಟಗಿಮಠ, ಪರಿಷತ್ ಸದಸ್ಯ ಅರುಣ್ ಶಹಪುರ ಸೇರಿದಂತೆ ಮತ್ತಿತರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಉತ್ತರ ಕರ್ನಾಟಕ ಭಾಗದ ಕರಡಿ ಮಜಲು, ಡೊಳ್ಳುಕುಣಿತ ಕಲಾವಿದರಿಂದ ಸಾಂಸ್ಕತಿಕ ಕಾರ್ಯಕ್ರಮ, ಖ್ಯಾತ ಹಿಂದೂಸ್ಥಾನಿ ಗಾಯಕಿ ಸಂಗೀತ ಕಟ್ಟಿ ಕುಲಕರ್ಣಿ ಅವರಿಂದ ಸಾಂಸ್ಕತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕತ ಡಾ.ಚಂದ್ರಶೇಖರ ಕಂಬಾರ ಅವರು ಸಾಹಿತು ಸಂಗಮೇಶ್ ಬಾದವಾಡಗಿ ಅವರು ಬರೆದಿರುವ ರೊಟ್ಟಿ ಪಂಚಮಿ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ.
ಕಾರ್ಯಕ್ರಮದ ನಂತರ ಉತ್ತರ ಕರ್ನಾಟಕ ಭಾಗದ ಸಂಸ್ಕತಿಯಂತೆ ಒಬ್ಬೊರಿಗೊಬ್ಬರು ಬನ್ನಿ ವಿನಿಮಯ ಮಾಡಿಕೊಂಡು ಬಂಗಾರದಂತೆ ಇರೋಣ ಎಂಬ ವಿಶೇಷ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ ಭಾಗದ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮುರುಗೇಶ್ ಜವಳಿ ಅವರು ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗೌರವಕಾರ್ಯದರ್ಶಿ ಶಂಕರಪಾಟೀಲ ಉಪಸ್ಥಿತರಿದ್ದರು.
0 Comments