ಬೆಂಗಳೂರು, ಅಕ್ಟೋಬರ್ 07 (ಕರ್ನಾಟಕ ವಾರ್ತೆ): ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಪ್ರಯುಕ್ತ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಸೂಚನೆ ಮೇರೆಗೆ, ಉಭಯ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 5609 ಮೆಟ್ರಿಕ್ ಪೂರ್ವ / ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿನ 910 ವಸತಿ ಶಾಲೆಗಳಲ್ಲಿ 3.42 ಲಕ್ಷ ವಿದ್ಯಾರ್ಥಿಗಳು ಹಾಗೂ ಇಲಾಖೆಯ 42,000 ಸಿಬ್ಬಂದಿಗಳು ಸೇರಿ ಬೃಹತ್ “ಸ್ವಚ್ಛತಾ ಶ್ರಮದಾನ” ಕಾರ್ಯಕ್ರಮವನ್ನು ಆಯೋಜಿಸಲು ಎಲ್ಲಾ ಜಿಲ್ಲೆಗಳಿಗೆ ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿರುತ್ತದೆ.
ಸಮಾಜ ಕಲ್ಯಾಣ ಸಚಿವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ, ಎಲ್ಲಾ ಅಧಿಕಾರಿ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಸೇರಿ ಸ್ವಚ್ಛತಾ ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಡಾ.ಎನ್.ನಾಗಾಂಬಿಕಾದೇವಿ, ಭಾ.ಆ.ಸೇ., ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರವಿಕುಮಾರ್ ಸುರಪುರ, ಭಾ.ಆ.ಸೇ. ರವರು ಬೆಂಗಳೂರು ನಗರ ಜಿಲ್ಲೆಯಲ್ಲಿನ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ, “ಸ್ವಚ್ಛತಾ ಶ್ರಮದಾನ” ಹಾಗೂ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ತದನಂತರ ಸಿಬ್ಬಂದಿ ಮತ್ತು ನಿಲಯಾರ್ಥಿಗಳಿಗೆ ಸ್ವಚ್ಛತಾ ಪಾಲನೆ ಕುರಿತು ಸೂಚನೆಗಳನ್ನು ನೀಡಿರುತ್ತಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಾದ ಪಿ.ವಸಂತಕುಮಾರ್ ಭಾ.ಆ.ಸೇ. ಅವರು ರಾಮನಗರ ಜಿಲ್ಲೆಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಗಾಂಧಿ ಜಯಂತಿಯ ಪ್ರಯುಕ್ತ ಇಲಾಖೆಯ ಎಲ್ಲಾ ಕಛೇರಿಗಳು, ವಸತಿ ಶಾಲೆ ಹಾಗೂ ವಿದ್ಯಾರ್ಥಿನಿಲಯಗಳ ಆವರಣ ಹಾಗೂ ಕೊಠಡಿಗಳನ್ನು ಎಲ್ಲಾ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೆಲ್ಲಾ ಸೇರಿ ಸ್ವಚ್ಛತಾ ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಗಾಂಧೀಜಿಯವರ ಜೀವನ ಸಾಧನೆಗಳು, ವಿಚಾರಧಾರೆಗಳು ಹಾಗೂ ಸರಳ ಜೀವನ ಕುರಿತಾಗಿ ಅರಿವು ಮೂಡಿಸಲು ಗಾಂಧೀಜಿಯವರ ಬಗ್ಗೆ ಚಿತ್ರಕಲಾ ಸ್ಪರ್ಧೆ, ಗಿಡ ನೆಡುವ ಕಾರ್ಯಕ್ರಮ, ರಸ ಪ್ರಶ್ನೆ ಕಾರ್ಯಕ್ರಮ, ಪ್ರಬಂಧ ಸ್ಪರ್ಧೆ, ಜಾಥಾ ಕಾರ್ಯಕ್ರಮ, ವಿದ್ಯಾರ್ಥಿನಿಲಯಗಳಲ್ಲಿ ಕಸ ವಿಲೇವಾರಿ ಇನ್ನೂ ಮುಂತಾದ ಬೃಹತ್ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ, ಯಶಸ್ವಿಯಾಗಿ ನಡೆಸಲಾಗಿದೆ.

0 Comments