ಬಳ್ಳಾರಿ, ಅ.18: ಬಳ್ಳಾರಿ ಜಿಲ್ಲಾಡಳಿತ, ಜಿಪಂ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವು ಅ.20ರಂದು ಬೆಳಗ್ಗೆ 10ಕ್ಕೆ ನಗರದ ನಲ್ಲಚೆರುವು ಪ್ರದೇಶದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗ್ಗೆ 9ಕ್ಕೆ ವಾಲ್ಮೀಕಿ ಭವನದಲ್ಲಿರುವ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್‌ಸಿAಗ್ ಅವರು ಪೂಜೆ ಹಾಗೂ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಾರಿಗೆ ಇಲಾಖೆಯ ಸಚಿವರಾದ ಬಿ.ಶ್ರೀರಾಮುಲು ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ.
ಬಳ್ಳಾರಿ ಗ್ರಾಮಾಂತರ ಶಾಸಕರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಇ.ತುಕಾರಾಂ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿ.ಸೋಮಶೇಖರ ರೆಡ್ಡಿ, ಎಂ.ಎಸ್.ಸೋಮಲಿ0ಗಪ್ಪ, ಜೆ.ಎನ್.ಗಣೇಶ್, ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹೆಚ್.ಹನುಮಂತಪ್ಪ, ಬುಡಾ ಅಧ್ಯಕ್ಷರಾದ ಪಿ.ಪಾಲನ್ನ ಅವರು ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಎಸ್.ಶ್ಯಾಮಣ್ಣ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಜಿಪಂ ಸಿಇಒ ಕೆ.ಆರ್.ನಂದಿನಿ, ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಕೀನಾ ಅವರು ಹಾಜರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Varthajala, Malleshwaram, Bengaluru
0 Comments