Ticker

6/recent/ticker-posts

Ad Code

Responsive Advertisement

ಶಿವಮೊಗ್ಗ: ಪ್ರಾಣಿವಧೆ ಹಾಗು ಮಾಂಸ ಮಾರಾಟ ನಿಷೇಧ

ಅಕ್ಟೋಬರ್ 01, ಶಿವಮೊಗ್ಗ: 2021 ನೆ ಸಾಲಿನ ಅಕ್ಟೋಬರ್ 02 ರಂದು ಗಾಂಧಿ ಜಯಂತಿ ಪ್ರಯುಕ್ತ ಕರ್ನಾಟಕ ಸರ್ಕಾರದ ಸುತ್ತೋಲೆಯನ್ವಯ ಪಾಲಿಕೆ ವ್ಯಾಪ್ತಿಯಲ್ಲಿರುವ ಮಾಂಸ ಮಾರಾಟಗಾರರು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟ ಉದ್ದಿಮೆದಾರರು ತಮ್ಮ ಉದ್ದಿಮೆಯನ್ನು ಬಂದ್ ಮಾಡುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆದೇಶಿಸಿದೆ.

ಈ ಕುರಿತಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಆದೇಶ ಹೊರಡಿಸಿದ್ದು, ನಾಳೆ ಗಾಂಧಿ ಜಯಂತಿ ಆಚರಣೆ ಹಿನ್ನಲೆಯಲ್ಲಿ ನಗರದಲ್ಲಿ ಪ್ರಾಣಿವಧೆ ಹಾಗು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.


Post a Comment

0 Comments

Ad Code

Responsive Advertisement