ಮಧುಗಿರಿ: ಅಪೌಷ್ಟಿಕತೆಯ ಸಮಸ್ಯೆ ನಿವಾರಿಸಿ ಮಕ್ಕಳನ್ನು ಆರೋಗ್ಯವಂತರನ್ನಾಗಿಸಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ರಮೇಶ್ ಬಾಬು ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ , ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಾದ್ಯಂತ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರ ಮುಂದಿನ ಸಧೃಢ ಆರೋಗ್ಯಕ್ಕಾಗಿ ಜನರಲ್ಲಿ ಅರಿವು ಮೂಡಿಸಿ ಅಂತಹ ಮಕ್ಕಳಿಗೆ ಉಚಿತವಾಗಿ ಚಿಕಿತ್ಸೆ ಕೊಡಿಸುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಿದ್ದು, ಸಾರ್ವಜನಿಕರು ಉಪಯೋಗ ಪಡೆದುಕೊಳ್ಳಬೇಕು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಕೋವಿಡ್ ನಂತಹ ಮಹಾಮಾರಿಯು ಪುಟ್ಟಮಕ್ಕಳನ್ನು ಬಿಡದೇ ಬಾಧಿಸುತ್ತಿದೆ ಆದ್ದರಿಂದ ಜನರು ಜಾಗೃತರಾಗಬೇಕು ಎಂದರು.
ಸಿಡಿಪಿಒ ಅನಿತಾ ಮಾತನಾಡಿ ಆರೋಗ್ಯವಂತ ಮಕ್ಕಳಿಂದ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ. ಪೆÇೀಷಕರು ಮೂಢನಂಬಿಕೆ, ಕೀಳರಿಮೆ ಬಿಟ್ಟು ಅಂಗಮವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಸರಿಯಾದ ಮಾಹಿತಿ ನೀಡಿ ಸಹಕರಿಸಬೇಕು. ಮಕ್ಕಳ ರಕ್ಷಣೆ ಎಲ್ಲರ ಜವಾಬ್ದಾರಿ ಯಾಗಿದೆ ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಧರಣೇಶ್ ಗೌಡ ಮಾತನಾಡಿ ಹಳ್ಳಿಗಳಲ್ಲಿ ಬಡತನ, ಅರಿವಿನ ಕೊರತೆಯಿಂದ ಅನೇಕ ಜನ ಮಕ್ಕಳಿಗೆ ಸರಿಯಾದ ಚಿಕಿತ್ಸೆ ಕೊಡಿಸದೆ ಇರುವುದು ಕಂಡುಬರುತ್ತಿದೆ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರದೆ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಮೂಲಕ ಅವರಲ್ಲಿ ಅಪೌಷ್ಟಿಕತೆಯ ಸಮಸ್ಯೆ ದೂರಮಾಡಬೇಕು. ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪ್ರಭಾವ ಬೀರುವುದರಿಂದ ಅಪೌಷ್ಟಿಕತೆ ಯಿಂದ ಇರುವ ಮಕ್ಕಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಜನರು ಮಕ್ಕಳ ಆರೋಗ್ಯದ ಮೇಲೆ ನಿಗಾವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಡಾ.ಗಂಗಾಧರ್, ಡಾ.ರತ್ನಾವತಿ, ಸೇರಿದಂತೆ ಸಾರ್ವಜನಿಕ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು, ಪೋಷಕರು ಹಾಜರಿದ್ದರು.
0 Comments