ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಕರ್ನಾಟಕ ರಾಜ್ಯ ನೆಹರು ಯುವ ಕೇಂದ್ರಗಳ ರಾಜ್ಯ ನಿರ್ದೇಶಕರಾಗಿ ಎಂ.ಎನ್.ನಟರಾಜ್ ಅವರು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ್ದಾರೆ.
ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆಯ ಹಿರಿಯ ಅಧಿಕಾರಿಯಾದ ಇವರು ತಮಿಳುನಾಡು ಮತ್ತು ಪಾಂಡಿಚೇರಿ ರಾಜ್ಯಗಳ ರಾಜ್ಯ ನಿರ್ದೇಶಕರಾಗಿ ಕಳೆದ ಮೂರು ವರ್ಷಗಳು ಕಾರ್ಯನಿರ್ವಹಿಸಿದ್ದಾರೆ.
ಈ ಹಿಂದೆ ಗುಲ್ಬರ್ಗಾ, ಮೈಸೂರು, ಬಿಜಾಪುರ, ಹಾಸನ ಜಿಲ್ಲೆಗಳಲ್ಲಿ ಹಾಗೂ ನವದೆಹಲಿಯಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ ಅನುಭವವನ್ನು ಹೊಂದಿರುತ್ತಾರೆ. ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳ ನೆಹರು ಯುವ ಕೇಂದ್ರಗಳು ರಾಜ್ಯ ನಿರ್ದೇಶಕರ ವ್ಯಾಪ್ತಿಗೆ ಒಳಪಡುತ್ತವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
0 Comments