ನವಂಬರ್ 24, ಹೊಸದಿಲ್ಲಿ: ಇವತ್ತು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಎಲ್ಲಾ ಮೂರು ಕೃಷಿ ಕಾಯಿದೆಗಳನ್ನು ಹಿಂಪಡೆಯುವ ಪ್ರಸ್ತಾವನೆಗೆ ಮುದ್ರೆ ಬಿದ್ದಿದೆ. ರೈತರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಕೃಷಿ ಕಾನೂನು ವಾಪಸ್ ಪಡೆಯುವ ಪ್ರಕ್ರಿಯೆಗಳು ಈಗಾಗಲೆ ಆರಂಭಗೊ0ಡಿವೆ. ಇದೇ 29 ರಿಂದ ಆರಂಭಗೊಳ್ಳಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಕಾನೂನುಗಳನ್ನು ಹಿಂಪಡೆಯುವ ಅಂತಿಮ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ ಎಂದು ತಿಳಿದುಬಂದಿದೆ.
ಸಂಸತ್ತಿನಲ್ಲಿ ಅಂಗೀಕಾರಗೊ0ಡ ನಂತ್ರ, ಎಲ್ಲಾ ಮೂರು ಕಾನೂನುಗಳು ಸಂಪೂರ್ಣವಾಗಿ ರದ್ದಾಗಲಿವೆ ಎಂದು ತಿಳಿದುಬಂದಿದೆ. ಈ ಹಿಂದೆ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದರು. ಈ ಕಾನೂನುಗಳು ರೈತರ ಹಿತಾಸಕ್ತಿಯನ್ನು ರಕ್ಷಣೆ ಮಾಡುತ್ತಿತ್ತು. ಆದರೆ, ರೈತರಿಗೆ ಈ ಕಾನೂನಿನ ಮಹತ್ವ ವಿವರಿಸಲು ನಮಗೆ ಸಾಧ್ಯವಾಗಲಿಲ್ಲ.
ಆದ್ದರಿಂದ ಎಲ್ಲಾ ಮೂರು ಕಾನೂನುಗಳನ್ನು ಹಿಂಪಡೆಯಲಾಗುತ್ತಿದೆ ಎಂದು ಪ್ರಧಾನಿ ಹೇಳಿದ್ದರು. ಅಲ್ಲದೆ, ಪ್ರತಿಭಟನಾಕಾರರು ತಮ್ಮ ಮನೆಗಳಿಗೆ ಹಿಂತಿರುಗುವ0ತೆ ಇದೇ ವೇಳೆ ಮನವಿ ಮಾಡಿಕೊಂಡಿದ್ದರು. ಆದ್ರೆ, ಪ್ರಧಾನಿ ಘೋಷಣೆಯಿಂದ ರೈತರೆಲ್ಲ ಸಂತಸಗೊ0ಡರು. ಆದರೆ, ಕೃಷಿ ಕಾನೂನು ಸಂಪೂರ್ಣವಾಗಿ ಸಂಸತ್ತಿನಲ್ಲಿ ಅಂಗೀಕಾರವಾಗುವವರೆಗೆ ತಮ್ಮ ಹೋರಾಟ ಮುಂದುವರಿಯಲಿದೆ ಅಂತಾ ರೈತ ಹೋರಾಟಗಾರರು ತಿಳಿಸಿದ್ದಾರೆ.
0 Comments