ಬೆಂಗಳೂರು, November 12: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ರಿಂದ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ 4 ರಿಂದ 5 ದಿನ ಭಾರೀ ಮಳೆಯಾಗುವ ಸಂಭವ ಇದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 13,14 ಮತ್ತು ನವೆಂಬರ್ 15ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Vartajaala
0 Comments