Ticker

6/recent/ticker-posts

Ad Code

Responsive Advertisement

BELLARY : ಕೊಳವೆ ಬಾವಿಗಳಿಗೆ ಸಂಬ0ಧಿಸಿದ ಸಾರ್ವಜನಿಕರ ದೂರು/ಅಹವಾಲು ಸ್ವೀಕಾರ

ಗಂಗಾ ಕಲ್ಯಾಣ ವಿಶೇಷ ಸದನ ಸಮಿತಿ ಪ್ರವಾಸ ಬಳ್ಳಾರಿ ಜಿಲ್ಲೆಯಲ್ಲಿ ನ.09ರಂದು ಗಂಗಾ ಕಲ್ಯಾಣ ಯೋಜನೆಗಳ ಅನುಷ್ಠಾನ ಪರಿಶೀಲನೆ: ಕೊಳವೆ ಬಾವಿಗಳಿಗೆ ಸಂಬ0ಧಿಸಿದ ಸಾರ್ವಜನಿಕರ ದೂರು/ಅಹವಾಲು ಸ್ವೀಕಾರ

ಬಳ್ಳಾರಿ, ನ.04: ಕರ್ನಾಟಕ ವಿಧಾನಪರಿಷತ್‌ನ ಗಂಗಾಕಲ್ಯಾಣ ವಿಶೇಷ ಸದನ ಸಮಿತಿಯು ನ.09ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಗಂಗಾ ಕಲ್ಯಾಣ ಯೋಜನೆಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಲಿದೆ ಮತ್ತು ಇದಕ್ಕೆ ಸಂಬAಧಿಸಿದAತೆ ಸಾರ್ವಜನಿಕರ ದೂರುಗಳನ್ನು ಸಹ ಆಹ್ವಾನಿಸಲಿದೆ.


ಗಂಗಾಕಲ್ಯಾಣ ವಿಶೇಷ ಸದನ ಸಮಿತಿ ಅಧ್ಯಕ್ಷ ಡಾ.ವೈ.ಎ.ನಾರಾಯಣಸ್ವಾಮಿ ಮತ್ತು 08 ಜನ ಸದಸ್ಯರು ಹಾಗೂ ಅಧಿಕಾರಿಗಳ ನೇತೃತ್ವದ ತಂಡ ನ.09ರಂದು ಮಧ್ಯಾಹ್ನ 12ಕ್ಕೆ ರಾಯಚೂರು ಮೂಲಕ ರಸ್ತೆ ಮಾರ್ಗವಾಗಿ ಬಳ್ಳಾರಿ ಆಗಮಿಸಲಿದ್ದಾರೆ.

ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ ಕೊರೆಸಲಾದ ಕೊಳವೆಬಾವಿಗಳಿಗೆ ಸಂಬ0ಧಿಸಿದ0ತೆ ಬಂದಿರುವ ದೂರುಗಳ ಬಗ್ಗೆ ನ.09ರಂದು ಮಧ್ಯಾಹ್ನ 12:15ಕ್ಕೆ ಜಿಪಂ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಲಿದ್ದಾರೆ.

ನಂತರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಮಧ್ಯಾಹ್ನ 12:45ರಿಂದ 2ರವರೆಗೆ ಜಿಪಂ ನಜೀರ್ ಸಭಾಂಗಣದಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿಗಳು,ಜಿಪಂ ಸಿಇಒ,ವಿವಿಧ ಏಳು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮ್ಯಾನೇಜರ್ ಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಇದಾದ ನಂತರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಮಧ್ಯಾಹ್ನ 2:30ರಿಂದ ಸಂಜೆ 5:30ರವರೆಗೆ ಬಳ್ಳಾರಿ ವಿಭಾಗದಲ್ಲಿ ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ ರೈತರ ಜಮೀನಿನಲ್ಲಿ ಕೊರೆಸಲಾದ ಕೊಳವೆಬಾವಿಗಳ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.

ನಂತರ ಅವರು ರಾತ್ರಿ ಹಂಪಿ ಎಕ್ಸ್ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಕರ್ನಾಟಕ ವಿಧಾನಪರಿಷತ್ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0 Comments

Ad Code

Responsive Advertisement