ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಮುಂದುವರೆದ ಮಳೆಯ ಸಿಂಚನ !
ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಮಳೆಯ ಅಬ್ಬರ ಮತ್ತೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ. ಇತ್ತ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಇರಲಿದ್ದು, ಹೆಚ್ಚು ಮಳೆ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮತ್ತು ಮೈಸೂರಿನಲ್ಲಿ ಇವತ್ತು ಸಹ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಬಿಟ್ಟು ಬಿಡದ ಮಳೆ ಜೊತೆ ಚಳಿ ಸಹ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇವತ್ತ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 18.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಮಳೆ ಮತ್ತು ಚಳಿಯಿಂದ ಬೇಸತ್ತ ಬೆಂಗಳೂರಿಗರಿಗೆ ಇವತ್ತು ಕೊಂಚ ಸೂರ್ಯ ದರ್ಶನ ನೀಡಲಿದ್ದಾನೆ ಎಂದು ತಿಳಿದುಬಂದಿದೆ.
ಉತ್ತರ ಕರ್ನಾಟಕದ ರಾಯಚೂರು, ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವವಾಗಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಲಿದೆ. ನವೆಂಬರ್ ನಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ರೈತರಿಗೆ ನಷ್ಟವನ್ನುಂಟು ಕೂಡ ಮಾಡುತ್ತಿದೆ.
ಮೈಸೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ದಾವಣಗೆರೆ, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಸಾರ್ವಜನಿಕರು ಎಚ್ಚರಿಕೆ ಇಂದ ಇರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.
ವಾರ್ತಾ ಜಾಲ

0 Comments