Ticker

6/recent/ticker-posts

Ad Code

Responsive Advertisement

ರೈತರ ಖಾತೆಗೆ ಡಿಬಿಟಿ ಮೂಲಕ ಬೆಳೆ ಹಾನಿ ಪರಿಹಾರ

 ರಾಜ್ಯದಲ್ಲೀ ಬಿದ್ದ ಭಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಬೆಳೆಹಾನಿ ಕುರಿತು ಸಮೀಕ್ಷೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಿರಂತರ ಮಳೆ ಸಮೀಕ್ಷೆಗೆ ಅಡ್ಡಿಯಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.



ಎಡೆಬಿಡದೇ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಹಲವು ಅನಾಹುತಗಳು ಸೃಷ್ಟಿಯಾಗಿವೆ. ರೈತರ ಬೆಳೆ ನೀರುಪಾಲಾಗಿದ್ದು, ಹಲವರು ಮನೆ-ಮಠ ಕಳೆದುಕೊಂಡಿದ್ದಾರೆ. ಪರಿಹಾರ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗದ ಅನುಮತಿ ಪಡೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು.

ಭಾರಿ ಮಳೆಯಿಂದಾಗಿ ಜುಲೈ, ಆಗಸ್ಟ್ ನಲ್ಲಿ 3 ಲಕ್ಷ ರೈತರ ಬೆಳೆ ಹಾನಿಯಾಗಿತ್ತು.  130 ಕೋಟಿ ಪರಿಹಾರ ಬಿಡುಗಡೆಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಸಧ್ಯದ ಮಳೆ ಹಾನಿ ಕುರುತಾಗಿ ಶೀಘ್ರದಲ್ಲಿ ಸಮೀಕ್ಷೆ ನಡೆಸಿ ಪರಿಹಾರ ರ‍್ಯದ ಬಗ್ಗೆ ರ‍್ಚಿಸಲಾಗುವುದು ಎಂದರು.

Post a Comment

0 Comments

Ad Code

Responsive Advertisement