Ticker

6/recent/ticker-posts

Ad Code

Responsive Advertisement

ನಾನು ಮುಖ್ಯಮಂತ್ರಿ ಆಗಬೇಕು: ಜಿ ಪರಮೇಶ್ವರ್

 November 13, Tumkur: ತುಮಕೂರಿನಲ್ಲಿ ಮಾಜಿ ಡಿಸಿಎಂ ಜಿ ಪರಮೇಶ್ವರ್ ಅವರು ಸಭೆಯಲ್ಲಿ ಸಾರ್ವಜನಿಕವಾಗಿ ನಾನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂಬ ತಮ್ಮ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. 



ಈ ಬಗ್ಗೆ ನಮ್ಮ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರೊಂದಿಗೆ ಈ ವಿಚಾರವನ್ನು ಹಂಚಿಕೊಂಡಿದ್ದೇನೆ ಎಂದು ಕೂಡ ಹೇಳಿದರು. ಕರ್ನಾಟಕ ತಾಯಿಯು ಯಾವಾಗ ನನಗೆ ಮುಖ್ಯಮಂತ್ರಿಯಾಗುವ ಅವಕಾಶ ನೀಡುತ್ತಾಳೆ ಎಂದು ಹೇಳಿಕೊಂಡಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳ ಪದವಿಯ ಚರ್ಚೆಗೆ ದಾರಿಯಾಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಗಾದಿಗೆ ಒಂದು ಕಡೆ ರಾಜ್ಯ ಅಧ್ಯಕ್ಷರಾದಂತಹ ಡಿ ಕೆ ಶಿವಕುಮಾರ್ ಅವರು ಕಣ್ಣಿಟ್ಟಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ ಸರಿ. ಅದೇ ರೀತಿಯಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡಿರುವುದು ಗುಟ್ಟಾಗಿ ಏನೂ ಉಳಿದಿಲ್ಲ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಎದ್ದುಕಾಣುವಂತೆ ನಾಯಕರುಗಳ ಬಯಕೆಗಳು ತೋರುತ್ತವೆ. ಪರಮೇಶ್ವರ್ ಅವರು ನಾನು ಮುಖ್ಯಮಂತ್ರಿ ಆಗುತ್ತೇನೋ ಇಲ್ಲವೋ ಎಂದು ಬೇಸರ ವ್ಯಕ್ತಪಡಿಸಿದರು. ಒಟ್ಟಿನಲ್ಲಿ ಕೂಸು ಹುಟ್ಟುವ ಮುಂಚೆ ಗುಲಾಬಿ ಕುಲಾಬಿ ಚಿಂತೆ ಎಂಬಂತೆ ಎದ್ದು ಕಾಣುತ್ತಿದೆ.

ವಾರ್ತಾ ಜಾಲ

Post a Comment

0 Comments

Ad Code

Responsive Advertisement