ಬೆಂಗಳೂರು, ನವೆಂಬರ್ 19 (ಕರ್ನಾಟಕ ವಾರ್ತೆ) : ರಾಷ್ಟ್ರದ ಮಾಜಿ ಪ್ರಧಾನಮಂತ್ರಿಗಳಾದ ದಿವಂಗತ ಇಂದಿರಾಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ನವೆಂಬರ್ 19 ರಿಂದ 26ರವರೆಗೆ “ರಾಷ್ಟ್ರೀಯ ಐಕ್ಯತಾ ಸಪ್ತಾಹ” ದಿನವನ್ನಾಗಿ ಆಚರಿಸಲಾಗುತ್ತಿದೆ.
ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಅವರು ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಇಲಾಖೆಯ ಸಭಾಂಗಣದಲ್ಲಿ “ರಾಷ್ಟ್ರೀಯ ಐಕ್ಯತಾ ಸಪ್ತಾಹ” ಪ್ರಮಾಣವಚನ ಬೋಧಿಸಿದರು.
0 Comments