ಬೆಂಗಳೂರು, ನ.27- ಬೆಂಗಳೂರು ವಕೀಲರ ಸಂಘಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಡಿ.19ರಂದು ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾಕಾರಿಯಾಗಿರುವ ಕೆ.ಎನ್.ಫಣೀಂದ್ರ ಅವರು ತಿಳಿಸಿದ್ದಾರೆ.
ಹೈಕೋರ್ಟ್, ಸಿಟಿ ಸಿವಿಲ್ ಕೋರ್ಟ್, ಹೆಚ್ಚುವರಿ ಮುಖ್ಯ ಮೆಟ್ರೋ ಪಾಲಿಟಿನ್, ಮ್ಯಾಜಿಸ್ಟೆçÃಟ್ ಕೋರ್ಟ್ ಹಾಗೂ ಮೇಯೋಹಾಲ್ ಕೋರ್ಟ್ಗಳಲ್ಲಿ ವಕೀಲರಾಗಿರುವ 16 ಸಾವಿರಕ್ಕೂ ಹೆಚ್ಚು ನೊಂದಾಯಿತ ಮತದಾರರು ಮತದಾನದ ಅರ್ಹತೆ ಪಡೆದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಯಿ0ದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಸಲು ಡಿ.3 ಕಡೆಯ ದಿನಾಂಕವಾಗಿದೆ. ಅಂದೇ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಡಿ.6 ಅಂತಿಮ ದಿನವಾಗಿದೆ.
0 Comments