ಬೆಂಗಳೂರು : ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡ್‌ನ ಅಬ್ಬಿಗೆರೆ ಪೈಪ್ ಲೈನ್ ರಸ್ತೆಯಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶಾಸ್ತ್ರೋಕ್ತವಾಗಿ ಸಂಪ್ರದಾಯದಂತೆ ಶ್ರೀ ಲಕ್ಷ್ಮೀದೇವಿ ಅಮ್ಮನವರಿಗೆ ವಿಶೇಷ ಅಲಂಕಾರವನ್ನು ಮಾಡಿ ಪ್ರಧಾನ ಅರ್ಚಕರಾದ ಲಕ್ಷ್ಮೀನಾರಾಯಣರವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲ್ಪಡಲಾಗಿತ್ತು.
ನಮ್ಮ ಬೆಂಗಳೂರು ಸುತ್ತಮುತ್ತಲಿನ ಹಾಗೂ ರಾಜ್ಯದಾದ್ಯಂತ ಎಲ್ಲಾ ಕಡೆಗಳಿಂದ ಮಾತ್ರವಲ್ಲದೆ, ನಮ್ಮ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ ರಾಜ್ಯಗಳ ದೂರದೂರದ ಸ್ಥಳಗಳಿಂದಲೂ ಈ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ದೀಪಾವಳಿ ಸಂದರ್ಭದಲ್ಲಿ ಬಂದು ಶ್ರೀ ಲಕ್ಷ್ಮೀದೇವಿ ಅಮ್ಮನವರ ದರ್ಶನವನ್ನು ಪಡೆದು ಕೃತಾರ್ಥರಾದರು.
ಶ್ರೀ ಮಹಾಲಕ್ಷ್ಮೀ ದೇವಿ ಆರಾಧಕರಾದ ಕೆ.ಎಂ. ತಿಪ್ಪೇಸ್ವಾಮಿ ಹಾಗೂ ಬಿ.ಅಣ್ಣಯ್ಯಪ್ಪನವರುಗಳ ಮಾರ್ಗದರ್ಶನದಲ್ಲಿ ಭಕ್ತಾದಿಗಳ ಸಹಕಾರದೊಂದಿಗೆ, ಯಶಸ್ವಿಯಾಗಿ ಈ ಬಾರಿ ದೀಪಾವಳಿಯನ್ನು ಭಕ್ತಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಈ ಸನ್ನಿಧಾನಕ್ಕೆ ನಂಬಿ ಬರುವ ಭಕ್ತರ ಇಷ್ಟಾರ್ಥಗಳನ್ನು ಅಮ್ಮನವರು ನೆರವೇರಿಸುವ ಪ್ರತೀತಿ ಹೊಂದಿರುವ ಈ ದೇವಸ್ಥಾನಕ್ಕೆ ಪ್ರತಿ ವರ್ಷ ಬರುವ ಭಕ್ತಾದಿಗಳ ಸಂಖ್ಯೆಯೂ ವೃದ್ಧಿಸುತ್ತಿದೆ. ಅಮ್ಮನ ಕರುಣೆ ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ನಾವು ಹಾರೈಸೋಣ.
VARTHAJALA, MALLESWARAM, BENGALURU
0 Comments