Ticker

6/recent/ticker-posts

Ad Code

Responsive Advertisement

ಕಂಪ್ಲಿ ವಿಜಯನಗರ ಜಿಲ್ಲೆ ಸೇರ್ಪಡೆ ಪ್ರಕರಣದ ವಿಚಾರಣೆ ಫೆಬ್ರವರಿ 15ಕ್ಕೆ ಮುಂದೂಡಿಕೆ!

ಬಳ್ಳಾರಿ, ಡಿಸೆಂಬರ್ 09: ಕಂಪ್ಲಿ ತಾಲೂಕನ್ನ ವಿಜಯನಗರ ಜಿಲ್ಲೆಗೆ ಸೇರ್ಪಡಿಸುವಂತೆ ಸಲ್ಲಿಸಲಾಗಿದ್ದ ಪಿಐಎಲ್ ನ ಪ್ರಕರಣವು ಮುಖ್ಯ ನ್ಯಾಯಾಧೀಶರಾದ ರಿತುರಾಜು ಅವಸ್ಥಿ ಮತ್ತು ಸಚಿನ್ ಶಂಕರ್ ಮಗದುಮ್ ರವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದು ಫೆಬ್ರವರಿ 15ಕ್ಕೆ ವಿಚಾರಣೆಯನ್ನ ಮುಂದೂಡಲಾಯಿತು ಎಂದು ಅರ್ಜಿದಾರರಾದ ವಕೀಲ ಮೋಹನ್ ಕುಮಾರ್ ದಾನಪ್ಪ ತಿಳಿಸಿದರು.


ಕಂಪ್ಲಿ ತಾಲೂಕನ್ನು ವಿಜಯನಗರ ಜಿಲ್ಲೆಗೆ ಸೇರಿಸದೇ ಕೈ ಬಿಟ್ಟಿರುವುದನ್ನು ಪ್ರಶ್ನಿಸಿ ಸರ್ಕಾರದ ಅಧಿಸೂಚನೆಯನ್ನ ರದ್ದು ಪಡಿಸಿ ಕಂಪ್ಲಿ ತಾಲೂಕನ್ನು ವಿಜಯನಗರ ಜಿಲ್ಲೆಗೆ ಸೇರ್ಪಡಿಸುವಂತೆ ರಾಜ್ಯ ಹೈಕೋರ್ಟ್ನಲ್ಲಿ 2021 ಮಾರ್ಚ್ 10 ರಂದು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಬಳ್ಳಾರಿ ಜಿಲ್ಲಾ ಗೌರವಾಧ್ಯಕ್ಷ ವಕೀಲ ಮೋಹನ್ ಕುಮಾರ್ ದಾನಪ್ಪ ಮತ್ತು ಕಂಪ್ಲಿ ತಾಲೂಕು ವಕೀಲರ ಬಳಗದ ಕಾರ್ಯಾಧ್ಯಕ್ಷರಾದ ಹಿರಿಯ ವಕೀಲ ಕೆ. ಪ್ರಭಾಕರ್ ರಾವ್ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ  ಪಿಐಎಲ್ ಅರ್ಜಿಯನ್ನು ಸಲ್ಲಿಸಿದ್ದರು.


Post a Comment

0 Comments

Ad Code

Responsive Advertisement