ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರ ಸಂಖ್ಯೆ ಹೆಚ್ಚಿಗೆ ಇದ್ದು, ಬಿಜೆಪಿ ಅಭ್ಯರ್ಥಿಯ ಗೆಲುವು ಖಚಿತ ಎಂದು ಅರಣ್ಯ ಮತ್ತು ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 25 ಪರಿಷತ್ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ, ಬೆಳಗಾವಿ ಜಿಲ್ಲೆಯ ಎರಡು ಸ್ಥಾನಗಳಿಗೆ ತ್ರಿಕೋನ ಸ್ಪರ್ದೆ ಎರ್ಪಟ್ಟಿದೆ, ಈ ಬಗ್ಗೆ ಬಾಗೇವಾಡಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಉಮೇಶ್ ಕತ್ತಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಯ ನಡುವೆ ಸ್ಪರ್ದೆ ಇರಬಹುದು ಅದರ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ಆದ್ರೆ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಈಗಾಗಲೇ ಪ್ರಚಾರ ಆರಂಭಿಸಿದ್ದೂ, ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ, ಮಹಾಂತೇಶ್ ಕವಟಗಿಮಠ ಪರಿಷತ್ ಸದಸ್ಯ ಆಗುವುದು ಖಚಿತ ಎಂದು ಸಚಿವ ಉಮೇಶ್ ಕತ್ತಿ ತಿಳಿಸಿದರು.
ನಮ್ಮ ಪಕ್ಷದ ವರಿಷ್ಠರ ನಿರ್ದೇಶನದ ಮೆರೆಗೆ ಈಗಾಗಲೇ ಜಿಲ್ಲೆಯಲ್ಲಿ ನಾವು ಕೆಲಸ ಮಾಡುತ್ತಿದ್ದೆವೆ, ಅತಿ ಹೆಚ್ಚು ಶಾಸಕರು ಬಿಜೆಪಿ ಪಕ್ಷದವರು ಇರುವುದರಿಂದ ಪ್ರಚಾರ ಕೂಡ ಸುಲಭ ಆಗಿದೆ. ಅಲ್ಲದೆ ಬಿಎಸ್ ಯಡಿಯೂರಪ್ಪ ಮತ್ತು ಪ್ರಧಾನಿ ಮೋದಿಯವರ ಗ್ರಾಮಗಳ ಅಭಿವೃದ್ಧಿ ಕುರಿತ ಕಾರ್ಯಕ್ರಮಗಳಿಗೆ, ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಆದ್ಯತೆ ಸಿಗಲಿದೆ ಎಂದು ಸಚಿವ ಉಮೇಶ್ ಕತ್ತಿ ತಿಳಿಸಿದರು.
ಇನ್ನೂ ಮಹಾಂತೇಶ್ ಕವಟಗಿಮಠ ಎರಡು ಬಾರಿ ಪರಿಷತ್ ಸದಸ್ಯರಾಗಿ ಒಳ್ಳೆಯ ಕಾರ್ಯಗಳನ್ನು ಮಾಡಿದ್ದಾರೆ, ಗ್ರಾಮ ಪಂಚಾಯತಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವ ಚಾಣಾಕ್ಷತೆ ಇರುವುದರಿಂದ, ಕವಟಗಿಮಠ ಗೆಲುವಿನ ಹಾದಿ ಸುಲಭ ಇದೆ ಎಂದು ಉಮೇಶ್ ಕತ್ತಿಯವರು ತಿಳಿಸಿದರು.
0 Comments