ಬೆಂಗಳೂರು: ಮಲ್ಲೇಶ್ವರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಬಾಬಾ ಸಾಹೇಬ್ ಅವರಿಗೆ ಗೌರವ ಸಮರ್ಪಿಸಲಾಯಿತು.
ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ, ಎಮ್.ಸಿ.ಎ ಅಧ್ಯಕ್ಷರಾದ ಮುನಿಕೃಷ್ಣ, ರಾಜ್ಯ ಕಾರ್ಯದರ್ಶಿಗಳಾದ ಜಗದೀಶ್ ಹಿರೇಮನಿ, ರಾಜ್ಯ ಕೋಶಾಧ್ಯಕ್ಷರಾದ ಸುಬ್ಬನರಸಿಂಹ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಲೋಕೇಶ್ ಅಂಬೆಕಲ್ಲು, ಎಸ್.ಸಿ. ಮೋರ್ಚಾ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಮತ್ತು ಕಾರ್ಯಾಲಯದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಡಾ|| ಅಂಬೇಡ್ಕರ್ ಅವರು ದೇಶಕ್ಕೆ ಜಗತ್ತಿನ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ ಎಂದು ಅತಿಥಿಗಳು ನೆನಪಿಸಿದರು. ಡಾ|| ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು.
0 Comments