ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ನಡೆ
ಬ್ಯಾಟರಾಯನ ಪುರ ಪೊಲೀಸ್ ಠಾಣೆಯಲ್ಲಿ ಅಮಾನವೀಯ ಘಟನೆಸಂಭವಿಸಿದ್ದು, ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿರುವುದಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷರು ಮತ್ತು ಬೆಂಗಳೂರು ನಗರ ಜಿಲ್ಲೆಯ ಮೂರು ಜಿಲ್ಲಾಧ್ಯಕ್ಷರುಗಳು ತಮಗೆ ಅಬಿನಂದನೆಗಳನ್ನು ಸಲ್ಲಿಸುತ್ತೇವೆ ಎಂದಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸಮಾಜಘಾತುಕ ವ್ಯಕ್ತಿಗಳಿಂದ ಇಂತಹ ಘಟನೆಗಳು ನಡೆಯುತ್ತಾ ಬಂದಿದ್ದು, ದಲಿತರು, ಹಿಂದುಳಿದ ವರ್ಗದವರು ಮತ್ತು ಅಲ್ಪಸಂಖ್ಯಾರೇ ಗುರಿಯಾಗಿದ್ದಾರೆ. ಇಂತಹ ಘಟನೆಗಳು ನಡೆಯುವುದರಿಂದ ಸಮಾಜದ ಸಾಮರಸ್ಯ ಮತ್ತು ಸಮಾನತೆಗೆ ಧಕ್ಕೆಯಾಗುತ್ತದೆ. ಇಂತಹ ಘಟನೆ ಮತ್ತು ಹಲ್ಲೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಕಾನೂನು ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ಇರ್ಷಾದ್ ಅಹಮದ್ ಶೇಖ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಹಿದಾಯತ್ ಉಲ್ಲಾಖಾನ್, ಬೆಂಗಳೂರು ಉತ್ತರ ಜಿಲ್ಲೆ ಅಧ್ಯಕ್ಷರಾದ ಫಾರೂಕ್ ಪಾಷಾ ಅವರು ಮನವಿ ಮಾಡಿಕೊಂಡಿದ್ದಾರೆ.
0 Comments