Ticker

6/recent/ticker-posts

Ad Code

Responsive Advertisement

ಇನ್ಮುಂದೆ ಕಣ್ಣೀರು ಹಾಕುವುದಿಲ್ಲ: ಹೆಚ್ ಡಿ ಕುಮಾರಸ್ವಾಮಿ

ಡಿ.06, ಮಂಡ್ಯ: ಮಾಜಿ ಮುಖ್ಯಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇನ್ಮುಂದೆ ಕಣ್ಣೀರು ಹಾಕುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಹೌದು, ಸುದ್ದಿಗಾರರೊಂದಿಗೆ ಮಂಡ್ಯದಲ್ಲಿ ಮಾತನಾಡಿದ ಕುಮಾರಸ್ವಾಮಿಯವರು, ಇನ್ಮುಂದೆ ನಾನು ಕಣ್ಣೀರು ಹಾಕಬಾರದು ಎಂದು ನಿರ್ಧರಿಸಿದ್ದೇನೆ. ಹಾಗೆಂದ ಮಾತ್ರಕ್ಕೆ ನಾನು ಕಟುಕ ಹೃದಯವನ್ನು ಹೊಂದಿದವನು ಎಂದರ್ಥವಲ್ಲ. ಜನರ ಕಷ್ಟವನ್ನು ಭಾವನಾತ್ಮಕವಾಗಿ ನೋಡಿದಾಗ ನಮ್ಮ ಹೃದಯ ಮಿಡಿಯುತ್ತೆದೆ ಎಂದರು. ನಾನು ಸಿಎಂ ಆಗಿದ್ದಾಗ ಕನಗನಮರಡಿ ಬಸ್ ದುರಂತ ನಡೆಯಿತು. ಅದನ್ನ ನೋಡಿ ನನ್ನ ಕಣ್ಣಲ್ಲಿ ನೀರು ಬಂತು, ಅದನ್ನ ನನ್ನ ವಿರೋಧಿಗಳು ನಾಟಕ ಎಂದು ಕರೆದರು. ಕೆಲವರು ಅದನ್ನೇ ಟವಲ್ನಲ್ಲಿ ಗ್ಲಿಸ್ರಿನ್ ಹಾಕ್ಕೊಂಡು ಅಳ್ತಾರೆ ಎಂದು ಪ್ರಚಾರ ಮಾಡಿದರು ಎಂದು ಕುಮಾರಸ್ವಾಮಿ ಅಸಮಧಾನ ಹೊರಹಾಕಿದರು.

                                   

2018ರಲ್ಲಿ ನಾನು ಸಿಎಂ ಆಗಿದ್ದಾಗ ಮಂಡ್ಯ ನಗರದ ಮೂಲಭೂತ ಸೌಕರ್ಯಗಳಿಗೆ ಹಣ ಮೀಸಲಿಟ್ಟಿದ್ದೆ. ಯಾವ ದುಡ್ಡನ್ನು ಬಿಜೆಪಿ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ನಮ್ಮ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ನಿಲ್ಲಿಸಿದ್ದಾರೆ. ಮಂಡ್ಯದಲ್ಲಿ 4-5 ಸ್ಥಾನ ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಮಂಡ್ಯಕ್ಕೆ ಏನು ಮಾಡಿದ್ದಾರೆ ಎಂದು ಇವರು ಜಿಲ್ಲೆಗೆ ಬರ್ತಾರೆ ಎಂದು ನನಗೆ ತಿಳಿಯುತ್ತಿಲ್ಲ ಎಂದು ಪ್ರಶ್ನಿಸಿದರು.

ಅಪ್ಪಾಜಿಗೌಡ ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತ. ಅಧಿಕಾರದಲ್ಲಿದ್ದಾಗ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದಾರೆ. ಕೆಲವರು ಜಾತ್ಯತೀತವಾದಿಗಳು, ಎಲ್ಲಾ ಸಮಾಜಗಳನ್ನು ಗೌರವಿಸುತ್ತಾರೆ ಎನ್ನುತ್ತಾರೆ. ಆದ್ರೆ ಚುನಾವಣೆಯಲ್ಲಿ ಜಾತಿ ಆಧಾರದ ಮೇಲೆ ಮತ ಕೇಳುತ್ತಾರೆ. ಮಂಡ್ಯ ಜನ ಇವರಿಗೆ ತಕ್ಕ ಉತ್ತರ ಕೊಡುತ್ತಾರೆ ಎಂದರು.

ಈ ಸಮಯದಲ್ಲಿ ಮಗನ ಸೋಲು ನೆನಸಿಕೊಂಡ ಎಚ್ಡಿಕೆ. ವಿಧಾನಪರಿಷತ್ ಚುನಾವಣೆ 2023ರ ಚುನಾವಣೆಗೆ ಜೆಡಿಎಸ್ಗೆ ಭದ್ರ ಬುನಾದಿಯಾಗಲಿದೆ, ಅಲ್ಲದೆ ಮುಂದಿನ ಚನಾವಣೆಗೆ ನಮಗೆ ಇಲಿಂದಲೇ ಬುನಾದಿ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು ನೈತಿಕವಾಗಿ ಗೆದ್ದಿದ್ದೇವೆ, ಕೆಲವು ಹಿತೇಷಿಗಳು ನಮಗೆ ನಂಬಿಸಿ ಬೆನಿಗೆ ಚೂರಿ ಹಾಕಿದರು. ಕೇವಲ ನಂಬರ್ ಗೇಮ್ನಲ್ಲಿ ಸೋತೆವು. ಮಂಡ್ಯ ಜಿಲ್ಲೆಯ ಜನ ನಮ್ಮನ್ನ ಆಗಲೂ ಬೆಂಬಲಿಸಿದ್ದಾರೆ, ಈಗಲು ಬೆಂಬಲಿಸುತ್ತಾರೆ. ಮಂಡ್ಯ ಜಿಲ್ಲೆಯ ಜನ ಹಾಸನಕ್ಕಿಂತೂ ಹೆಚ್ಚಾಗಿ ಜೆಡಿಎಸ್ ಉಳಿಸಿದ್ದಾರೆ. ದೇವೇಗೌಡರ ಸಂಕಷ್ಟ ಸಮಯದಲ್ಲಿ ಕೈ ಹಿಡಿದಿದ್ದಾರೆ. ಎಲ್ಲಾ ಪಕ್ಷ ಸೇರಿ ಹೆಣೆದ ಚಕ್ರವ್ಯೂಹದಲ್ಲಿ ನಿಖಿಲ್ ಸೋತರು, ಮಾನಸಿಕವಾಗಿ ನಾವು ಮಂಡ್ಯದಲ್ಲಿ ಗೆದ್ದಿದ್ದೇವೆ. ಆ ಚಕ್ರವ್ಯೂಹದಿಂದ ನಾವು ಆಚೆ ಬರಲಿದ್ದೇವೆ. ಈ ಚುನಾವಣೆಯಲ್ಲಿ ಕುತಂತ್ರದ ರಾಜಕಾರಣಕ್ಕೆ ಉತ್ತರ ಸಿಗಲಿದೆ ವಿಶ್ವಾಸ ವ್ಯಕ್ತಪಡಿಸಿದರು.

2023ರ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ. 224 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿ ಹಾಕುತ್ತೇವೆ. ಮಾಜಿ ಸಿಎಂ ಯಡಿಯೂರಪ್ಪ ನನ್ನ ಬಳಿ ವೈಯಕ್ತಿಕ ಮನವಿ ಮಾಡಿದ್ದಾರೆ. ಯಡಿಯೂರಪ್ಪರವರು ಹಿರಿಯರು ಮತ್ತು ಸ್ನೇಹಜೀವಿ. ಪಕ್ಷದ ಚೌಕಟ್ಟಿನಲ್ಲಿ ಅವರು ನನ್ನ ಸಹಕಾರ ಕೇಳಿಲ್ಲ. ನಾನು ನಾಳೆ ಪತ್ರಿಕಾಗೋಷ್ಠಿ ನಡೆಸಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಟ್ರೋಲ್ ಆಗಿದ್ದ ಎಚ್ಡಿಕೆ ಕಣ್ಣೀರು, ಈ ಹಿಂದೆ ನಡೆದ ಚುನಾವಣೆ ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದು, ಅವರ ರಾಜಕೀಯ ವಿರೋಧಿಗಳಿಂದ ತೀವ್ರ ಟೀಕೆಗೂ ಮತ್ತು ಜನರ ಟ್ರೋಲ್ಗೂ ಒಳಗಾಗಿತ್ತು. 2018 ರ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ರಾಜರಾಜೇಶ್ವರಿ ನಗರದಲ್ಲಿ ಪ್ರಚಾರ ಮಾಡುವಾಗ, ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ, ಹಾಗಾಗಿ ಮತ ಹಾಕಿ, ಎಂದು ಕಣ್ಣೀರು ಹಾಕುತ್ತಾ ಕುಮಾರಸ್ವಾಮಿ ಮತ ಕೇಳಿದ್ದರು.

ಮುಂದೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವಾಗ ಕಣ್ಣೀರು ಹಾಕಿರಲಿಲ್ಲ. ಮುಂದೆ ಕೆ.ಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ಮತ್ತೆ ಕಣ್ಣೀರು ಹಾಕಿದ್ದ ಕುಮಾರಸ್ವಾಮಿ ಬಿಜೆಪಿಯ ಟೀಕೆಗೆ ಗುರಿಯಾಗಿದ್ದರು. ಕಣ್ಣೀರು ಹಾಕೋದನ್ನ ನಮ್ಮ ಕುಟುಂಬ ಪೇಟೆಂಟ್ ಪಡೆದಿದೆ ಎಂದು ಸದಾನಂದಗೌಡ ಟೀಕಿಸಿದ್ದರು.

Varthajala Daily, Bengaluru

Post a Comment

0 Comments

Ad Code

Responsive Advertisement