ಬಳ್ಳಾರಿ, ಡಿ 12: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಕ್ಕಳ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮಾಹಿತಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪಾಲನೆ ಮತ್ತು ರಕ್ಷಣೆ ಅವಶ್ಯವಿರುವ ಹಾಗೂ ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಮಕ್ಕಳ ಪುರ್ನವಸತಿಗಾಗಿ ಸರ್ಕಾರವು ಮಕ್ಕಳಿಗೆ ಸಂಬ0ಧಪಟ್ಟ ಆಯಾ ಅಂಶಗಳಲ್ಲಿ ಕ್ಷೇತ್ರ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರೇತರ ಸಂಸ್ಥೆಗಳೊ0ದಿಗೆ ಕೈಜೋಡಿಸಿ ಕರ್ತವ್ಯ ನಿರ್ವಹಿಸಬೇಕಾಗಿರುತ್ತದೆ ಎಂದು ಅವರು ವಿವರಿಸಿದ್ದಾರೆ.
ಆದ್ದರಿಂದ ಮಕ್ಕಳ ಪಾಲನಾ ಸಂಸ್ಥೆಗಳನ್ನು ನಿರ್ವಹಿಸುತ್ತಿರುವ ಎನ್.ಜಿ.ಒ ಗಳನ್ನು ಹೊರತುಪಡಿಸಿ ಮಕ್ಕಳಿಗೆ ಸಂಬ0ಧಪಟ್ಟ ಆಯಾ ಅಂಶಗಳಲ್ಲಿ ಕ್ಷೇತ್ರ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರೇತರ ಸಂಸ್ಥೆಗಳೊ0ದಿಗೆ ಕೈಜೋಡಿಸಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸರ್ಕಾರೇತರ ಸಂಸ್ಥೆಗಳ ಮಾಹಿತಿಯನ್ನು ಮಕ್ಕಳ ರಕ್ಷಣಾ ನಿರ್ದೇಶನಾಲಯದ ವೆಬ್‌ಸೈಟ್‌ನಲ್ಲಿ ಅಳವಡಿಸಬೇಕಾಗಿರುವುದರಿಂದ
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಪಾಲನೆ ಮತ್ತು ರಕ್ಷಣೆ ಅವಶ್ಯವಿರುವ ಸರ್ಕಾರೇತರ ಸಂಸ್ಥೆಗಳ ಮಾಹಿತಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಂತಿಧಾಮ ಆವರಣ,ಕಂಟೋನ್ಮೆ0ಟ್, ಬಳ್ಳಾರಿ ದೂ.ಸಂ. 08392-294473, ªÉÆ.¸ÀA.7090376455, 9731748033 ಗೆ ಸಂರ್ಪಕಿಸಲು ಕೋರಲಾಗಿದೆ.
Varthajala Daily, Bengaluru
0 Comments